ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದರಾದ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಪಡೆದಿದ್ದಾರೆ.
ಮನಮೋಹನ ಸಿಂಗ್ ಅವರು ಗುರುವಾರ(ಡಿಸೆಂಬರ್.26) ಅನಾರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದಾರೆ. ದೆಹಲಿಯ ಮೋತಿಲಾಲ್ ನೆಹರು ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದರಾದ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ.
ಇನ್ನು ನಾಳೆ(ಡಿಸೆಂಬರ್.28) ಎಐಸಿಸಿ ಕಚೇರಿಯ ಮುಂಭಾಗದಲ್ಲಿ ಬೆಳಿಗ್ಗೆ 8.30 ರಿಂದ 9.30 ಗಂಟೆಯವರೆಗೂ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೇ ದೆಹಲಿಯ ರಾಜ್‌ಘಾಟ್ ಭವನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.