ದೇಶ- ವಿದೇಶ

ಮನಮೋಹನ ಸಿಂಗ್‌ ನಿಧನ: ಸೋನಿಯಾ, ಸಂಸದರಾದ ಪ್ರಿಯಾಂಕಾ ಗಾಂಧಿ, ರಾಹುಲ್‌ ಸೇರಿದಂತೆ ಅಂತಿಮ ದರ್ಶನ ಪಡೆದ ಗಣ್ಯರು

ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಸಂಸದರಾದ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಪಡೆದಿದ್ದಾರೆ.

ಮನಮೋಹನ ಸಿಂಗ್‌ ಅವರು ಗುರುವಾರ(ಡಿಸೆಂಬರ್‌.26) ಅನಾರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದಾರೆ. ದೆಹಲಿಯ ಮೋತಿಲಾಲ್‌ ನೆಹರು ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಸಂಸದರಾದ ಪ್ರಿಯಾಂಕಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ.

ಇನ್ನು ನಾಳೆ(ಡಿಸೆಂಬರ್‌.28) ಎಐಸಿಸಿ ಕಚೇರಿಯ ಮುಂಭಾಗದಲ್ಲಿ ಬೆಳಿಗ್ಗೆ 8.30 ರಿಂದ 9.30 ಗಂಟೆಯವರೆಗೂ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೇ ದೆಹಲಿಯ ರಾಜ್‌ಘಾಟ್‌ ಭವನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಅರ್ಚನ ಎಸ್‌ ಎಸ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

4 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

5 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

9 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

9 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago