Mysore
30
light rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

ಮಾನಸ ಸರೋವರ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಹಾಯಧನ

ಬೆಂಗಳೂರು: ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಮತ್ತು ಚಾರ್‌ ಧಾಮ್‌ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯಧನ ಪ್ರಕಟಿಸಿದ್ದು, ಈ ಸಂಬಂಧ ಮಾರ್ಗಸೂಚಿ ಹೊರಡಿಸಿದೆ.

ಮಾನಸ ಸರೋವರ ಯಾತ್ರಾರ್ಥಿಗಳಿಗೆ ತಲಾ 30 ಸಾವಿರ ರೂ ಹಾಗೂ ಚಾರ್‌ ಧಮ್‌ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ 20 ಸಾವಿರ ರೂ ಮತ್ತು ಕಾಶಿ ಯಾತ್ರೆ ಕೈಗೊಂಡ 30,000 ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ ಸಹಾಯಧನ ಪಾವತಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಮುಜರಾಯಿ ಇಲಾಖೆ ಪ್ರಕಟಿಸಿದೆ.

ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್‌ ಕಾರ್ಡ್‌ ಅನ್ನು ಅಪ್‌ಲೋಡ್‌ ಮಾಡಬೇಕು. 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. 45 ವರ್ಷ ಮೇಲ್ಪಟ್ಟಿರುವ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್‌ಲೋಡ್‌ ಮಾಡಬೇಕು. ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.

ಇನ್ನೂ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳಲಿರುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್.‌1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು. 18 ವರ್ಷ ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು ಎಂದು ಮಾಹಿತಿ ನೀಡಿದೆ.

ಮಾನಸ ಸರೋವರ ಯಾತ್ರಾರ್ಥಿಗಳು ಈ ಸಹಾಯಧನದ ಮೂಲಕ ಯಾತ್ರೆ ಕೈಗೊಳ್ಳಬಹುದಾಗಿದೆ. ಹಣವಿಲ್ಲದೇ ಯಾತ್ರೆಗೆ ಹಿಂದೇಟು ಹಾಕುತ್ತಿರುವ ಜನರಿಗೆ ಈ ಸಹಾಯಧನದಿಂದ ಉತ್ತಮ ಅನುಕೂಲ ಆಗಲಿದೆ ಎನ್ನಲಾಗುತ್ತಿದೆ.

 

 

 

Tags: