ಇಂಫಾಲ್: ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ಶಸ್ತ್ರಧಾರಿ ಉಗ್ರರು ಹೊಂಚುದಾಳಿ ನಡೆಸಿದ್ದಾರೆ. ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಇಂದು(ಜೂ.10) ನಡೆದ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ದಾಳಿ ನಡೆದಾಗ ಸಿಎಂ ಬೆಂಗಾವಲು ಪಡೆ ಹಿಂಸಾಚಾರ ಪೀಡಿತ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿತ್ತು. ಈ ವೇಳೆ ಭದ್ರತಾ ಪಡೆಗಳ ವಾಹನಗಳ ಮೇಲೆ ಹಲವು ಬಾರಿ ಗುಂಡಿನ ದಾಳಿ ನಡೆಸಲಾಯಿತು. ಭದ್ರತಾಪಡೆ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದಾಗ ಸಿಎಂ ಇರಲಿಲ್ಲ. ಈ ವೇಳೆ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 53 ರ ಉದ್ದಕ್ಕೂ ಕೋಟ್ಲೆನ್ ಗ್ರಾಮದ ಬಳಿ ಇನ್ನೂ ದಾಳಿ-ಪ್ರತಿದಾಳಿ ನಡೆಯುತ್ತಿದೆ ಎನ್ನಲಾಗಿದೆ.
ಹೊಂಚುದಾಳಿಯ ವೇಳೆ ಇಬ್ಬರು ಸಿಬ್ಬಂದಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
ದೆಹಲಿಯಿಂದ ಇಂಫಾಲ್‌ಗೆ ಹಿಂದಿರುಗುತ್ತಿದ್ದ ಮುಖ್ಯಮಂತ್ರಿ ಬಿರೇನ್ ಸಿಂಗ್, ಇತ್ತೀಚಿನ ಹಿಂಸಾತ್ಮಕ ಘಟನೆಗಳನ್ನು ಅವಲೋಕಿಸಲು ಜಿರಿಬಾಮ್‌ಗೆ ಭೇಟಿ ನೀಡಲು ಯೋಜಿಸಿದ್ದರು. ಶಂಕಿತ ಉಗ್ರರು ಶನಿವಾರ(ಜೂ.8) ಎರಡು ಪೊಲೀಸ್ ಔಟ್‌ಪೋಸ್ಟ್‌ಗಳು, ಅರಣ್ಯ ಬೀಟ್ ಕಚೇರಿ ಮತ್ತು 70 ಮನೆಗಳಿಗೆ ಬೆಂಕಿ ಹಚ್ಚಿದ್ದರು.
ಹಿಂಸಾಚಾರ ಪೀಡಿತ ಜಿರಬಾಮ್ ಜಿಲ್ಲೆಯು ರಾಜ್ಯ ರಾಜಧಾನಿ ಇಂಫಾಲ್‌ನಿಂದ 220 ಕಿ.ಮೀ ದೂರದಲ್ಲಿದೆ. ಇದು ಅಸ್ಸಾಂ ಗಡಿ ಪ್ರದೇಶದ ಸಮೀಪದಲ್ಲಿದೆ. ಕುಕಿ ಸಮುದಾಯ ಬಹುಪಾಲು ಮಂದಿ ಇಲ್ಲಿ ವಾಸಿಸುತ್ತಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…