ದೇಶ- ವಿದೇಶ

ಮಣಿಪುರ: ಭದ್ರತಾ ಪಡೆಗಳಿಗೆ ಬೆದರಿಕೆ ನೀಡಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು

ಇಂಫಾಲ: ಭದ್ರತಾ ಪಡೆಗಳಿಗೆ ಬೆದರಿಕೆ ನೀಡಿದ್ದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಬೆದರಿಕೆಯೊಡಿದ್ದ ಮಣಿಪುರದ ನಿಷೇಧಿತ ಸಂಘಟನೆಯ ಕಾಂಗ್ಲೈಪಾಕ್‌ ಕಮ್ಯುನಿಸ್ಟ್‌ ಪಕ್ಷದ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬೆದರಿಕೆಯನ್ನು ನೀಡಿದ್ದ ಇಬ್ಬರು ಉಗ್ರರನ್ನು ಬಿಷ್ಣುಪುರ ಹಾಗೂ ಪೂರ್ವ ಇಂಫಾಲ್‌ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಇವರಿಬ್ಬರೂ ಹಣ ಸುಲಿಗೆಯಲ್ಲಿ ಭಾಗಿಯಾಗಿದ್ದು, ವಾಂಗ್ಖೇಮ್‌ ರೋಹಿತ್‌ ಸಿಂಗ್‌(18) ಹಾಗೂ ತಂಗ್ಜಮ್‌ ನೊಂಗನ್‌ ಮೀಟೈ(18) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಬೆದರಿಕೆಯೊಡ್ಡಿದ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲು ಭದ್ರತಾಪಡೆಗಳು ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಮಣಿಪುರದ ನಿಷೇಧಿತ ಯುನೈಟೆಡ್‌ ನ್ಯಾಷನಲ್‌ ಲಿಬರೇಷನ್‌ ಫ್ರಂಟ್‌ನ್‌ ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

15 mins ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

60 mins ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

1 hour ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

1 hour ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ…

2 hours ago