ಹೊಸದಿಲ್ಲಿ: ಉಸಿರಾಟದ ತೊಂದರೆಯಿಂದ ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ದೆಹಲಿಯ ನಿಗಮ್ ಭೋಧ್ ಫಾಟ್‌ನಲ್ಲಿ ನೆರವೇರಲಿದೆ.
ಸಿಂಗ್ ಅವರಿಗೆ ಅಂತಿಮ ವಿದಾಯ ಸಲ್ಲಿಸಲಾಗುತ್ತಿದೆ. ಇಂದು ದೆಹಲಿಯ ಎಐಸಿಸಿ ಕಚೇರಿಯಿಂದ ಪಾರ್ಥಿವ ಶರೀರದ ಮೆರವಣಿಗೆ ನಡೆಯುತ್ತಿದ್ದು, ಸಕಲ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಇಂದು ಬೆಳಿಗ್ಗೆ 8 ಗಂಟೆಗೆ ಸಿಂಗ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಹಾಗೂ ಅಂತಿಮಯಾತ್ರೆ ಶುರುವಾಗಿದ್ದು, ಈಗಾಗಲೇ ದೆಹಲಿಯ ಭೋಧ್ ಘಾಟ್ ತಲುಪಿದೆ.
ಸಕಲ ಸರ್ಕಾರಿ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.





