Mysore
22
overcast clouds

Social Media

ಶನಿವಾರ, 11 ಜುಲೈ 2026
Light
Dark

ನಾಳೆ ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ

ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌(92) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡ ಅವರು, ಅಧಿಕೃತವಾಗಿ ಇಂದು ತಿಳಿಸಲಾಗುವುದು ಎಂದಿದ್ದಾರೆ.

ಸಿಂಗ್‌ ಅವರ ಪಾರ್ಥಿವ ಶರೀರ ಏಮ್ಸ್‌ನಿಂದ ಗುರುವಾರ ತಡರಾತ್ರಿ ನಿವಾಸಕ್ಕೆ ತಲುಪಿದೆ. ಇಂದು ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಈಗಾಗಲೇ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ ವಾದ್ರಾ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮನಮೋಹನ್ ಸಿಂಗ್‌ ಅವರ‌ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.

 

 

 

Tags:
error: Content is protected !!