ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಇದಕ್ಕೂ ಮೊದಲು ಮಾರ್ಕ್ ಕಾರ್ನಿ ಬ್ಯಾಂಕ್ ಆಫ್ ಇಂಗ್ಲೆಂಡ್ ಮತ್ತು ಬ್ಯಾಂಕ್ ಆಫ್ ಕೆನಡಾದ ಅಧ್ಯಕ್ಷರಾಗಿದ್ದರು.
ಕಳೆದ ಜನವರಿಯಲ್ಲಿ ಜಸ್ಟಿನ್ ಟ್ರುಡೊ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಕಾರ್ನಿ ಅವರು ಲಿಬರಲ್ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದರು.
ಈ ಹಿನ್ನೆಲೆಯಲ್ಲಿ ಶುಕ್ರವಾರ ಅವರು ಕೆನಡಾದ 24ನೇ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಮಾರ್ಕ್ ಕಾರ್ನಿ ಅವರು, ನಮ್ಮ ಸರ್ಕಾರ ನಿರ್ಣಾಯಕವಾಗಿ ಕಾರ್ಯನಿರ್ವಹಿಸಲು ಸಿದ್ಧವಾಗಿದೆ. ಕೆನಡಿಯನ್ನರ ನಿರೀಕ್ಷೆ ಪೂರ್ಣಗೊಳಿಸಲು ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ. ಕೆನಡಾದ ಭವಿಷ್ಯವನ್ನು ರಕ್ಷಿಸುವ ಅನುಭವಿ ಸಚಿವ ಸಂಪುಟ ನಮ್ಮದು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.