ಮುಂಬೈ : ಸೋಮವಾರ (ಏ.7) ಬೆಳಿಗ್ಗೆ ಷೇರು ಮಾರುಕಟ್ಟೆ ಅಕ್ಷರಶಃ ರಕ್ತಪಾತ ಕಂಡಿದೆ. ಕೆಲವೇ 20 ನಿಮಿಷಗಳಲ್ಲಿ ಭಾರತೀಯ ಹೂಡಿಕೆದಾರರು ಸುಮಾರ 20.16 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದಾರೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭಿಸಿದ ತೆರಿಗೆ ಸಮರದಿಂದ ಷೇರು ಮಾರುಕಟ್ಟೆಯಲ್ಲಿ ಇಂತಹ ನಷ್ಟ ಕಂಡು ಬಂದಿದೆ.
ಏಷ್ಯಾದ ಷೇರುಪೇಟೆಗಳು ಮತ್ತು ಅಮೆರಿಕದ ಷೇರುಪೇಟೆಗಳಲ್ಲಿ ಮಾರಾಟ ಕುಸಿತವು ಗಮನಾರ್ಹ ನಷ್ಟವನ್ನು ಸೂಚಿಸಿದ್ದು, ಸೆನ್ಸೆಕ್ಸ್ 4,000 ಅಂಕ ಕುಸಿತ ದಾಖಲಿಸಿದೆ. ಭಾರತೀಯ ಈಕ್ವಿಟಿ ಮಾರುಕಟ್ಟೆ 10 ತಿಂಗಳಲ್ಲೇ ಅತ್ಯಧಿಕ ಕುಸಿತ ಕಾಣುವಂತೆ ಮಾಡಿದೆ. ಇದರ ಜೊತೆಗೆ ಹೂಡಿಕೆದಾರರ 20 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ.
ಜಾಗತಿಕ ಆರ್ಥಿಕ ಹಿಂಜರಿತದ ಭಯ ಮತ್ತು ವ್ಯಾಪಾರ ಯುದ್ಧದ ಹೆಚ್ಚುತ್ತಿರುವ ಪರಿಣಾಮದಿಂದಾಗಿ, ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಷೇರುಗಳನ್ನು ಮಾರಾಟ ಮಾಡಿದ್ದು, ಇದರ ಪರಿಣಾಮ ಎಂಎಸ್ಸಿಐ ಏಷ್ಯಾ ಪೆಸಿಫಿಕ್ ಸೂಚ್ಯಂಕವು ಶೇ. 7.9 ರಷ್ಟು ಕುಸಿದಿದೆ. ಇದು ಅಕ್ಟೋಬರ್ 2008 ರ ನಂತರದ ಅತಿದೊಡ್ಡ ಕುಸಿತವಾಗಿದೆ. ಟಿಎಸ್‍ಎಂಸಿ, ಟೆನ್ಸೆಂಟ್ ಮತ್ತು ಸೋನಿಯಂತಹ ದೊಡ್ಡ ಕಂಪನಿಗಳ ಷೇರುಗಳು ಹೆಚ್ಚಿನ ನಷ್ಟವನ್ನು ಅನುಭವಿಸಿವೆ. ಭಾರತದಲ್ಲಿ, ಬಿಎಸ್‍ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 3000 ಪಾಯಿಂಟ್ ಗಳ ಕುಸಿತ ಕಂಡಿತು. ನಿಫ್ಟಿ50 ಕೂಡ 919 ಪಾಯಿಂಟ್ ಗಳಷ್ಟು ಕುಸಿದಿದೆ.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಹೂಡಿಕೆಯನ್ನು ಹಿಂದಕ್ಕೆ ಪಡೆದ ಕಾರಣ ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚಂಕ್ಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚಂಕ್ಯ ನಿಫ್ಟಿ ಭಾರೀ ಇಳಿಕೆ ಕಂಡಿದೆ. ಸೆನ್ಸೆಕ್ಸ್ ಆರಂಭದಲ್ಲಿ 4 ಸಾವಿರ ಅಂಕ ಪತನಗೊಂಡು ನಂತರ ಚೇತರಿಕೆ ಕಂಡಿತ್ತು. ಬೆಳಗ್ಗೆ 11 ಗಂಟೆಯ ವೇಳೆಗೆ 2,900 ಅಂಕ ಚೇತರಿಕೆಯಾಗಿ 72,423.48 ರಲ್ಲಿ ವ್ಯವಹಾರ ನಡೆಸುತ್ತಿತ್ತು. ನಿಫ್ಟಿ 900 ಅಂಕ ಇಳಿಕೆಯಾಗಿ 21,960.80 ರಲ್ಲಿ ವ್ಯವಹಾರ ನಡೆಸುತ್ತಿದೆ. ರಿಯಾಲ್ಟಿ, ಐಟಿ, ಆಟೋ ಮತ್ತು ಲೋಹ ಮುಂತಾದ ಕ್ಷೇತ್ರಗಳ ಷೇರುಗಳು ಮೌಲ್ಯ ಇಳಿಕೆಯಾಗಿದೆ. ಸೆನ್ಸೆಕ್ಸ್ ಸುಮಾರು 4,000 ಪಾಯಿಂಟ್ಗಳ ಕುಸಿತವನ್ನು ಕಂಡಿದ್ದು, ಕಳೆದ ವಹಿವಾಟಿನ ಅವಧಿಯಿಂದ 3.5% ಕ್ಕಿಂತ ಹೆಚ್ಚು ಕುಸಿತ ಕಂಡಿದೆ, ಆದರೆ ನಿಫ್ಟಿ ಬೆಳಿಗ್ಗೆ 1,000 ಪಾಯಿಂಟ್ಗಳಿಗೂ ಹೆಚ್ಚು ಕುಸಿತ ಕಂಡಿದೆ.
ಸೋಮವಾರ ಬೆಳಿಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಏಷ್ಯಾದ ಎಲ್ಲ ಮಾರುಕಟ್ಟೆಗಳಲ್ಲಿ ಭಾರೀ ಇಳಿಕೆಯಾಗಿತ್ತು. ಗಿಫ್ಟ್ ನಿಫ್ಟಿಯೂ ಅಂಕ ಇಳಿಕೆಯಾಗುತ್ತಿದ್ದಂತೆ ಭಾರತದಲ್ಲೂ ಪರಿಣಾಮ ಬೀಳುವುದು ಖಚಿತವಾಗಿತ್ತು. ಬೆಳಗ್ಗೆಯವರೆಗೆ 19 ಲಕ್ಷ ಕೋಟಿ ನಷ್ಟ ಸಂಭವಿಸಿದ್ದು ನಿಫ್ಟಿ ಮತ್ತು ಸೆನ್ಸೆಕ್ಸ್ ಮತ್ತಷ್ಟು ಕುಸಿದರೆ ನಷ್ಟದ ಪ್ರಮಾಣ ಮತ್ತಷ್ಟು ಏರಿಕೆಯಾಗಲಿದೆ.ಗಿಫ್ಟಿ ನಿಫ್ಟಿ 888, ಜಪಾನ್‍ನ ನಿಕ್ಕಿ 225 2,302 ಅಂಕ, ತೈವಾನ್‍ನ ವೈಯ್ಟೆಡ್ ಸೂಚ್ಯಂಕವೂ 2063 ಅಂಶ ಕುಸಿಯಿತು. ಹಾಂಕಾಂಗ್‍ನ ಹ್ಯಾಂಗ್‍ಸೆನ್ 2,677 ಅಂಕ ಕುಸಿದಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…