ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ಸ್ಮೃತಿ ಮಂದಾನ ಮೌನಮುರಿದಿದ್ದು, ತಮ್ಮ ಮದುವೆ ರದ್ದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸ್ಮೃತಿ ಮಂದಾನ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು, ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ. ಎರಡೂ ಕುಟುಂಬಗಳ ಗೌಪ್ಯತೆಯನ್ನು ಗೌರವಿಸಬೇಕು. ಈ ವಿಚಾರವನ್ನು ಇಲ್ಲಿಗೆ ನಿಲ್ಲಿಸುವಂತೆ ಸ್ಮೃತಿ ಮಂದಾನ ಮನವಿ ಮಾಡಿದ್ದಾರೆ.
ಕಳೆದ ಕೆಲ ವಾರಗಳಿಂದ ನನ್ನ ಜೀವನದ ಬಗ್ಗೆ ಸಾಕಷ್ಟು ಊಹಾಪೋಹಗಳು ಹಬ್ಬಿವೆ. ಹಾಗಾಗಿ ಈ ಸಮಯದಲ್ಲಿ ನಾನು ಮಾತನಾಡುವುದು ಮುಖ್ಯ ಅಂತಲೇ ಭಾವಿಸುತ್ತೇನೆ. ನಾನು ತುಂಬಾ ಖಾಸಗಿ ವ್ಯಕ್ತಿ. ಅದನ್ನು ಹಾಗೇ ಇಡಲು ಬಯಸುತ್ತೇನೆ. ಮದುವೆಯನ್ನು ರದ್ದುಗೊಳಿಸಲಾಗಿದೆ. ಈ ವಿಷಯವನ್ನು ಇಲ್ಲಿಗೆ ನಿಲ್ಲಿಸಲು ಬಯಸುತ್ತೇನೆ. ಈ ಸಮಯದಲ್ಲಿ ಎರಡೂ ಕುಟುಂಬಗಳ ಗೌಪ್ಯತೆ ಗೌರವಿಸಿ, ನಮ್ಮದೆ ಹಾದಿಯಲ್ಲಿ ಮುಂದುವರಿಸಲು ನಮಗೆ ಅವಕಾಶ ಕೊಡಿ ಎಂದು ವಿನಂತಿಸಿದ್ದಾರೆ.





