ನವದೆಹಲಿ: ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.
ಕ್ರಾಂತಿಕಾರಿ ಹೋರಾಟಗಾರರನ್ನು ಗಲ್ಲಿಗೇರಿಸಿದ ಇಂದಿನ ದಿನವನ್ನು ʼಬಲಿದಾನ ದಿವಸʼ ಎಂದು ಸ್ಮರಿಸಲಾಗುತ್ತಿದ್ದು, ಭಗತ್ ಸಿಂಗ್, ಸುಖದೇವ್ ಥಾಪರ್ ಮತ್ತು ಶಿವರಾಜ್ ರಾಜಗುರು ಅವರ ಪರಾಕ್ರಮ ತ್ಯಾಗ, ಹೋರಾಟ ಮತ್ತು ಆದರ್ಶಗಳನ್ನು ಈ ದಿನ ಸ್ಮರಿಸಲಾಗುತ್ತದೆ. ನರೇಂದ್ರ ಮೋದಿ ಸೇರಿದಂತೆ ದೇಶಾದಾದ್ಯಂತ ನಾಯಕರು ಇವರನ್ನು ಸ್ಮರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಇಂದು ನಮ್ಮ ದೇಶವು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ಅತ್ಯುನ್ನತ ತ್ಯಾಗವನ್ನು ನೆನಪಿಸಿಕೊಳ್ಳುತ್ತದೆ, ಸ್ವಾತಂತ್ರ್ಯ ಮತ್ತು ನ್ಯಾಯಕ್ಕಾಗಿ ಅವರ ನಿರ್ಭೀತ ಹೋರಾಟ ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಿದೆ ಎಂದು ʼಎಕ್ಸ್ʼ ನಲ್ಲಿ ಹಂಚಿಕೊಂಡಿದ್ದಾರೆ.





