ಇಸ್ಲಾಮಾಬಾದ್: ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ನಿಗೂಢ ಸಾವನ್ನಪ್ಪಿದ್ದಾನೆ.
ಬಹಾವಲ್ಪುರದಲ್ಲಿ ಕದ್ದುಮುಚ್ಚಿ ಅಂತ್ಯಕ್ರಿಯೆ ನಡೆಸಲಾಗಿದೆ. ಜೈಶ್-ಎ-ಮೊಹಮ್ಮದ್ ಸಂಘಟನೆಯು ತಾಹಿರ್ ಅನ್ವರ್ ಅವರ ಸಾವಿನ ಕುರಿತು ಅಧಿಕೃತ ಮಾಹಿತಿ ನೀಡದೆ ಮೌನ ವಹಿಸಿದೆ. ಸಾವಿನ ನಿಜವಾದ ಕಾರಣ ಇನ್ನೂ ನಿಗೂಢವಾಗಿದೆ. ವೈದ್ಯರಿಂದಲೂ ಸ್ಪಷ್ಟನೆ ಸಿಗದಿರುವುದು ಊಹಾಪೋಹಗಳನ್ನು ಹೆಚ್ಚಿಸಿದೆ.
ಆಪರೇಷನ್ ಸಿಂಧೂರ್ ವೇಳೆ ಬಹಾವಲ್ಪುರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಮಸೂದ್ ಅಜರ್ ಕುಟುಂಬದ ಹಲವು ಸದಸ್ಯರು ಸಾವನ್ನಪ್ಪಿದ್ದರು. ಆಗ ಬಚಾವಾಗಿದ್ದ ತಾಹಿರ್ ಅನ್ವರ್ ಈಗ ಅನುಮಾನಾಸ್ಪದ ಸಾವನ್ನಪ್ಪಿರುವುದು ಗಮನಾರ್ಹವಾಗಿದೆ. ಪಾಕಿಸ್ತಾನದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಹಲವು ವ್ಯಕ್ತಿಗಳು ನಿಗೂಢ ಸಾವನ್ನಪ್ಪುತ್ತಿದ್ದಾರೆ. ತಾಹಿರ್ ಅನ್ವರ್ ಅವರ ಸಾವೂ ಈ ಸರಣಿಯ ಭಾಗವಾಗಿರುವ ಸಾಧ್ಯತೆ ಇದೆ ಎಂದು ಬೇಹುಗಾರಿಕಾ ಮೂಲಗಳು ಸೂಚಿಸುತ್ತಿವೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…