ನವದೆಹಲಿ: ದೆಹಲಿಯಲ್ಲಿ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ಬಳಿಕ ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಮೂರು ದಿನಗಳ ಕಾಲ ಕೆಂಪುಕೋಟೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಇದನ್ನು ಓದಿ: ಕೆಂಪು ಕೋಟೆ ಬಳಿ ಸ್ಫೋಟ : 9 ಮಂದಿ ಸಾವು, ದೇಶಾದ್ಯಂತ ಹೈ ಅಲರ್ಟ್
ನಿನ್ನೆ ಸಂಜೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಪೋಟಕ್ಕೆ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಘಟನೆಯಿಂದ ಎಚ್ಚತ್ತ ಪೊಲೀಸರು ಕೆಂಪುಕೋಟೆ ಬಳಿ ಮೆಟ್ರೋ ನಿಲ್ದಾಣವನ್ನು ಮುಚ್ಚಲಾಗಿದ್ದು, ಈ ಭಾಗದಲ್ಲಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ದೆಹಲಿ ಮೆಟ್ರೋ ನಿಗಮವು ಲಾಲ್ ಕಿಲಾ ಮೆಟ್ರೋ ನಿಲ್ದಾಣವನ್ನು ಭದ್ರತಾ ಕಾರಣಗಳಿಂದ ಮುಚ್ಚಲಾಗಿದೆ. ಉಳಿದ ಎಲ್ಲಾ ನಿಲ್ದಾಣಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದೆ.





