Mysore
28
overcast clouds

Social Media

ಶನಿವಾರ, 16 ಮೇ 2026
Light
Dark

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಬಾಂಬ್‌ ಸ್ಫೋಟದ ಹೊಣೆಯನ್ನು ಸದ್ಯಕ್ಕೆ ಯಾವುದೇ ಗುಂಪು ವಹಿಸಿಕೊಂಡಿಲ್ಲ. ಆದರೆ ಈ ಕೃತ್ಯದ ಹಿಂದೆ ಪಾಕಿಸ್ತಾನಿ ತಾಲಿಬಾನ್‌ ಕೈವಾಡವಿದೆ ಎಂದು ಶಂಕಿಸಲಾಗಿದೆ.

ಈ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂಸಾಚಾರ ಹೆಚ್ಚುತ್ತಿರುವುದಕ್ಕೆ ಈ ಘಟನೆ ಪ್ರಮುಖ ಸಾಕ್ಷಿಯಾಗಿದೆ.

ಪಾಕಿಸ್ತಾನ ಮತ್ತು ಆಪ್ಘಾನಿಸ್ತಾನದ ನಡುವಿನ ಉದ್ವಿಗ್ನತೆ ಮುಂದುವರಿದಿದ್ದು, ಫೆಬ್ರವರಿ ಅಂತ್ಯದಿಂದ ನಡೆದ ಹೋರಾಟದಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!