ಜಮ್ಮು-ಕಾಶ್ಮೀರ: ಜಮ್ಮ ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಪೋಟದಿಂದ ಹಠಾತ್ ಪ್ರವಾಹ ಉಂಟಾಗಿ ನಾಲ್ವರು ಮೃತಪಟ್ಟಿದ್ದಾರೆ.
ಪ್ರವಾಹದಿಂದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾನ್ ಜಿಲ್ಲೆಗಳು ಸೇರಿದಂತೆ ಜಮ್ಮು ಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ಘಟನೆ ಸಂಭವಿಸಿದೆ.
ಅನೇಕ ನದಿಗಳಲ್ಲಿ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೀರಿ ಹರಿಯುತ್ತಿದ್ದು, ರಾತ್ರಿಯಿಡೀ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.
ಜಮ್ಮು ಪ್ರದೇಶದಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ಜನರು ಜಲಮೂಲಗಳು ಹಾಗೂ ಭೂಕುಸಿತ ಪೀಡಿತ ಪ್ರದೇಶಗಳಿಂದ ದೂರವಿರಲು ಸೂಚನೆ ನೀಡಲಾಗಿದೆ.





