Mysore
25
scattered clouds

Social Media

ಶನಿವಾರ, 31 ಜನವರಿ 2026
Light
Dark

ಉತ್ತರಾಖಂಡ್‌ನಲ್ಲಿ ಭೀಕರ ಮೇಘಸ್ಫೋಟ: 60ಕ್ಕೂ ಹೆಚ್ಚು ಮಂದಿ ನಾಪತ್ತೆ

uttarkand

ಉತ್ತರಾಖಂಡ್: ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದ ಪರಿಣಾಮ ಪ್ರವಾಹ ಹಾಗೂ ಗುಡ್ಡ ಕುಸಿದಿದ್ದು, 60ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಮೇಘಸ್ಫೋಟ ಸಂಭವಿಸಿದ ಪರಿಣಾಮ ನೀರು ಪ್ರವಾಹದಂತೆ ಹರಿದು ಬಂದಿದ್ದು, ಮನೆಗಳು ಸೇರಿದಂತೆ ಹಲವರು ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಎಸ್‌ಡಿಆರ್‌ಎಫ್‌ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದು, ಸರ್ಕಾರವು ಭಾರತೀಯ ಸೇನೆಯ ಸಹಾಯವನ್ನು ಸಹ ಪಡೆದುಕೊಂಡಿದೆ.

ಖಿರ್‌ ಗಂಗಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಿಂದಾಗಿ ಧರಾಲಿ ಮಾರುಕಟ್ಟೆ ಪ್ರದೇಶದಲ್ಲಿ ಹಾನಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಟ್ಟದಲ್ಲಿ ಮಣ್ಣು ಮಿಶ್ರಿತ ಕೆಂಪು ನೀರು ಹರಿದು ಬಂದ ಹಿನ್ನೆಲೆಯಲ್ಲಿ ತರಗೆಲೆಯಂತೆ ಮನೆಗಳು ಕೊಚ್ಚಿಹೋಗಿವೆ. ಮೇಘಸ್ಫೋಟದ ದೃಶ್ಯ ಸ್ಥಳೀಯರ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನೆ ಕುರಿತು ಮಾಹಿತಿ ನೀಡಿರುವ ಉತ್ತರಾಖಂಡ್‌ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಅವರು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

Tags:
error: Content is protected !!