Mysore
26
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಹುನಾನ್‌ ಪ್ರಾಂತ್ಯದಲ್ಲಿರುವ ಲಿಯುಯಾಂಗ್‌ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ರಕ್ಷಣಾ ಕಾರ್ಯಾಚರಣೆಗಳಲ್ಲಿ ಗರಿಷ್ಠ ಪ್ರಯತ್ನಗಳನ್ನು ಮಾಡಬೇಕೆಂದು ಕರೆ ನೀಡಿದ್ದಾರೆ. ಘಟನೆಯ ಬಗ್ಗೆ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Tags:
error: Content is protected !!