ಬಾಗ್ದಾದ್: ಇರಾಕ್‍ನ ಶಾಪಿಂಗ್ ಮಾಲ್‍ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 50 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಇರಾಕ್‍ನ ಅಲ್-ಕುಟ್ ನಗರದ ಹೈಪರ್ ಮಾರ್ಕೆಟ್‍ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ.
ಘಟನೆ ನಡೆಯಲು ನಿಖರ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ. ಮಾಲ್‌ನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಬೆಂಕಿ ಕಾಣಿಸಿಕೊಂಡ ಪರಿಣಾಮ ಮಾಲ್ ಧಗಧಗನೇ ಹೊತ್ತಿ ಉರಿಯುತ್ತಿರುವ ದೃಶ್ಯ ಎಲ್ಲೆಡೆ ಫುಲ್ ವೈರಲ್ ಆಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದರ ಆರಂಭಿಕ ತನಿಖಾ ಫಲಿತಾಂಶಗಳು ಎರಡು ದಿನಗಳಲ್ಲಿ ಬಿಡುಗಡೆಯಾಗಲಿವೆ ಎಂದು ಐಎನ್‍ಎ ವರದಿ ಮಾಡಿದೆ





