ದೇಶ- ವಿದೇಶ

ಇರಾಕ್‌ ಶಾಪಿಂಗ್‌ ಮಾಲ್‌ನಲ್ಲಿ ಭಾರೀ ಅಗ್ನಿ ಅವಘಡ: 50 ಜನರು ಸಾವು

ಬಾಗ್ದಾದ್: ಇರಾಕ್‍ನ ಶಾಪಿಂಗ್ ಮಾಲ್‍ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 50 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇರಾಕ್‍ನ ಅಲ್-ಕುಟ್ ನಗರದ ಹೈಪರ್‌ ಮಾರ್ಕೆಟ್‍ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ.

ಘಟನೆ ನಡೆಯಲು ನಿಖರ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ. ಮಾಲ್‌ನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಬೆಂಕಿ ಕಾಣಿಸಿಕೊಂಡ ಪರಿಣಾಮ ಮಾಲ್‌ ಧಗಧಗನೇ ಹೊತ್ತಿ ಉರಿಯುತ್ತಿರುವ ದೃಶ್ಯ ಎಲ್ಲೆಡೆ ಫುಲ್‌ ವೈರಲ್‌ ಆಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದರ ಆರಂಭಿಕ ತನಿಖಾ ಫಲಿತಾಂಶಗಳು ಎರಡು ದಿನಗಳಲ್ಲಿ ಬಿಡುಗಡೆಯಾಗಲಿವೆ ಎಂದು ಐಎನ್‍ಎ ವರದಿ ಮಾಡಿದೆ

ಆಂದೋಲನ ಡೆಸ್ಕ್

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

5 hours ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

5 hours ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

7 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

7 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

8 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

9 hours ago