ದೇಶ- ವಿದೇಶ

ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಮುಖಭಂಗ: ಪಕ್ಷದ ಘಟಕ ವಿಸರ್ಜಿಸಿದ ಮೆಹಬೂಬಾ ಮುಫ್ತಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ(ಪಿಡಿಪಿ)ಯ ಅಧ್ಯಕ್ಷೆ ಮೆಹಬೂಬ ಮುಫ್ತಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಘಟಕವನ್ನು ಶನಿವಾರ ವಿಸರ್ಜಿಸಿದ್ದಾರೆ.

ಮುಂದಿನ ದಿನಗಳಲ್ಲಿ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ, ಪಕ್ಷದ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಘಟಕದ ವಿಭಾಗಗಳನ್ನು ರಚಿಸಲಾಗುವುದು ಎಂದು ಪಿಡಿಪಿ ಪಕ್ಷ ತಿಳಿಸಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್‌ ಮಾಡಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಕೇವಲ ಮೂರು ಸ್ಥಾನಗೆದ್ದು ಭಾರಿ ಮುಖಭಂಗ ಅನುಭವಿಸಿದ ಬಳಿಕ, ಪಕ್ಷದ ಪರಾಮರ್ಶೆ ಸಭೆಯ ನಡೆಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಮಾಜಿ ಮುಖ್ಯಮಂತ್ರಿಯೂ ಆಗಿರುವ ಮುಫ್ತಿ ಅವರಿಗೆ ಈ ಫಲಿತಾಂಶ ಮುಜುಗರವನ್ನುಂಟು ಮಾಡಿದೆ. ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನ ಗೆದ್ದಿದ್ದ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ನಾಯಕ ಒಮರ್‌ ಅಬ್ದುಲ್ಲಾ ಅವರು ಇಂಡಿಯಾ ಮೈತ್ರಿಕೂಟದ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

8 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

8 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

8 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

9 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

9 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

9 hours ago