ಹೊಸದಿಲ್ಲಿ : ಭಾರತದಲ್ಲಿ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿ ಬೆಲ್ಜಿಯಂನಲ್ಲಿ ಬಂಧನಕ್ಕೊಳಪಟ್ಟಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ದೇಶಕ್ಕೆ ಹಸ್ತಾಂತರ ಮಾಡಿದರೆ ಕಾನೂನು ರೀತಿ ನಡೆಸಿಕೊಳ್ಳುತ್ತೇವೆ ಎಂದು ಗೃಹಸಚಿವಾಲಯ ಪತ್ರ ಬರೆದಿದೆ.
ಬೆಲ್ಜಿಯಂನ ನ್ಯಾಯಾಂಗ ಅಧಿಕಾರಿಗಳಿಗೆ ಮತ್ತು ಸಚಿವಾಲಯಕ್ಕೆ ಕೇಂದ್ರ ಗೃಹಕಲ್ಯಾಣ ಇಲಾಖೆ ಪತ್ರ ಬರೆದಿದ್ದು, ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರ ಮಾಡಬೇಕೆಂದು ಔಪಚಾರಿಕವಾಗಿ ಮನವಿ ಮಾಡಿತ್ತು.
ನಿಮ್ಮ ದೇಶಕ್ಕೆ ಹಸ್ತಾಂತರ ಮಾಡಿದರೆ ಅವರನ್ನು ಕಾನೂನುಬದ್ಧವಾಗಿ ನಡೆಸಿಕೊಳ್ಳುತ್ತೀರಾ? ಎಂಬ ಪತ್ರಕ್ಕೆ ಉತ್ತರಿಸಿರುವ ಗೃಹ ಇಲಾಖೆ, ಆರೋಪಿಯನ್ನು ದೇಶದ ಕಾನೂನಿನ ಪ್ರಕಾರವೇ ನಡೆಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದೆ.
ಒಂದು ವೇಳೆ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡಿದರೆ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ಜೈಲಿನ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದೇವೆ. ವೈದ್ಯಕೀಯ ಚಿಕಿತ್ಸೆ, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸುವ ಆಶ್ವಾಸನೆ ಕೊಡಲಾಗಿದೆ. ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರ ಮಾಡುವಂತೆ ಅಲ್ಲಿನ ಸರ್ಕಾರಕ್ಕೆ ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಮನವಿ ಮಾಡಿಕೊಂಡಿದೆ.
ಐಪಿಸಿ ಸೆಕ್ಷನ್ ೧೨೦ ಬಿ, ೪೦೯, ೪೨೦, ೪೭೭ ಎ, ೨೦೧ ಹಾಗೂ ಭ್ರಷ್ಟಾಚಾರ ತಡೆಕಾಯ್ದೆ ೧೯೯೮ ಅಡಿ ವಿವಿಧ ದೂರುಗಳನ್ನು ಸಿಬಿಐ ದಾಖಲಿಸಿದೆ. ಪತ್ರದಲ್ಲಿ ಮೆಹುಲ್ ಚೋಕ್ಸಿಗೆ ನಿರ್ದಿಷ್ಟ ಸೌಲಭ್ಯ, ವಸತಿ ವ್ಯವಸ್ಥೆ, ವೈದ್ಯಕೀಯ ವೆಚ್ಚ, ಮೇಲ್ವಿಚಾರಣೆ ಕಾರ್ಯ ವಿಧಾನಗಳು ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಈ ಆರೋಪಿಯನ್ನು ತಕ್ಷಣವೇ ಹಸ್ತಾಂತರಿಸಬೇಕು.
ಆರೋಪಿಯನ್ನು ಮುಂಬೈನ ಅರ್ತೂರು ರಸ್ತೆಯಲ್ಲಿರುವ ಜೈಲಿನಲ್ಲಿ ಇಡಲಾಗುವುದು. ಆದಷ್ಟು ಶೀಘ್ರ ಹಸ್ತಾಂತರ ಮಾಡುವಂತೆ ಸಿಬಿಐ ಕೋರಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…