ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಕರ್ನಾಟಕಕ್ಕೆ ಬಹುದೊಡ್ಡ ಗೆಲುವು ಸಿಕ್ಕಿದೆ. ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಿಯನ್ನುಂಟುಮಾಡಿತ್ತು.
ಅಲ್ಲದೇ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಯೋಜನೆ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೇಕೆದಾಟು ಯೋಜನೆ ಇನ್ನೂ ಆರಂಭಿಕ ಹಂತದಲ್ಲಿದ್ದು, ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ತಿಳಿಸಿದೆ. ತಮಿಳುನಾಡು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…