Mysore
27
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ದೆಹಲಿಗೆ ಭೇಟಿ ನೀಡಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಬಳಿಕ ಇಂದು ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಬಗ್ಗೆ ಸ್ಪಷ್ಟತೆ ಇದೆ. ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಅನುಮತಿ ಸಿಗುವ ಸಾಧ್ಯತೆ ಇದೆ ಎಂದರು.

ಯೋಜನೆ ಕುರಿತು ತಮಿಳುನಾಡಿನ ಆಕ್ಷೇಪಣೆಗಳನ್ನು ಸುಪ್ರೀಂಕೋರ್ಟ್‌ ಪರಿಗಣಿಸಿಲ್ಲ. ಯೋಜನೆ ಆರಂಭಿಸಲು ಯಾವುದೇ ಸಮಸ್ಯೆಗಳಿಲ್ಲ. ವಿಸ್ತೃತ ಯೋಜನಾ ವರದಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ನಿನ್ನೆ ರಾಜ್ಯಸಭೆಯಲ್ಲಿ ಅನ್ಬುಮಣಿ ರಾಮದಾಸ್‌‍ ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಸರ್ಕಾರ ಅಣೆಕಟ್ಟು ನಿರ್ಮಾಣಕ್ಕೆ ನೆರೆಯ ರಾಜ್ಯದ ಅನುಮತಿ ಕೇಳುವ ಅಗತ್ಯ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಈ ನಡುವೆ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್‌ ಜೋಸೆಫ್‌ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಆಗಸ್ಟ್‌.3ರಂದು ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ. ಅಂದು ಯಾವ ನಿರ್ಧಾರಗಳಾಗುತ್ತವೆ ಎಂದು ಕಾದು ನೋಡುತ್ತಿದ್ದೇವೆ ಎಂದು ಹೇಳಿದರು.

ಮೇಕೆದಾಟು ಯೋಜನೆಗೆ ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯವಾಗಿ ಮಂಡ್ಯ ಬಳಿ ಭೂಮಿ ನೀಡಲು ಪರಿಶೀಲನೆ ನಡೆಯುತ್ತಿದೆ. ಸಚಿವ ಸಂಪುಟದಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.

Tags:
error: Content is protected !!