Mysore
28
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಸಂಭ್ರಮ, ಘೋಷಣೆಗಳು ಮುಗಿಲುಮುಟ್ಟಿದ್ದವು. ಭಾರತಕ್ಕೆ ಬಂದ ಮೆಸ್ಸಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ.

ಮೆಸ್ಸಿಯ ಪ್ರವಾಸದ ಸಂಘಟಕ ಸತಾದ್ರು ದತ್ತಾ ಈ ಬಗ್ಗೆ ಮಾತನಾಡಿದ್ದಾರೆ. 14 ವರ್ಷಗಳ ನಂತರ ಮೆಸ್ಸಿ ಭಾರತಕ್ಕೆ ಮರಳಿರುವುದು ತುಂಬಾ ಸಂತೋಷ ತಂದಿದೆ. ಭಾರತದೊಂದಿಗೆ ಫುಟ್ಬಾಲ್ ಸಂಬಂಧವು ಪುನರುಜ್ಜೀವನಗೊಳ್ಳುತ್ತಿದೆ. ಹಿಂದೆಂದೂ ಇಷ್ಟೊಂದು ಪ್ರಾಯೋಜಕರು ಭಾರತೀಯ ಫುಟ್‌ಬಾಲ್‌ನೊಂದಿಗೆ ಸಂಬಂಧ ಹೊಂದಿರಲಿಲ್ಲ ಎಂದು ಸತಾದ್ರು ದತ್ತಾ ಹೇಳಿದ್ದಾರೆ.

ಮೆಸ್ಸಿ ನೋಡಲು ಮುಗಿಬಿದ್ದ ಫ್ಯಾನ್ಸ್
ಮೆಸ್ಸಿಯ ಕೋಲ್ಕತ್ತಾ ವೇಳಾಪಟ್ಟಿಯು ಆಯ್ದ ಅತಿಥಿಗಳು ಮತ್ತು ಸಂಘಟಕರಿಗೆ ಬೆಳಿಗ್ಗೆ 9:30 ರಿಂದ 10:30 ರವರೆಗೆ ಖಾಸಗಿ ಭೇಟಿ ಮತ್ತು ಶುಭಾಶಯದೊಂದಿಗೆ ಪ್ರಾರಂಭವಾಗಿದೆ. ನಂತರ ಅವರು ಆನ್‌ಲೈನ್‌ನಲ್ಲಿ ತಮ್ಮ ಪ್ರತಿಮೆಯನ್ನು ವರ್ಚುವಲ್ ಆಗಿ ಉದ್ಘಾಟಿಸಲಿದ್ದಾರೆ. ನಂತರ ಮೆಸ್ಸಿ ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆಯುವ ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಇಲ್ಲಿ ಸಾವಿರಾರು ಜನರು ಕ್ರೀಡಾಂಗಣದಲ್ಲಿ ಸೇರಿದ್ದಾರೆ.

ಇದನ್ನೂ ಓದಿ:-ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ಮೆಸ್ಸಿ ತಮ್ಮ ಸಹ ಆಟಗಾರರಾದ ಲೂಯಿಸ್ ಸುವಾರೆಜ್ ಮತ್ತು ರೊಡ್ರಿಗೋ ಡಿ ಪಾಲ್ ಅವರೊಂದಿಗೆ ಭಾರತಕ್ಕೆ ಆಗಮಿಸಿದ್ದಾರೆ. ಮೆಸ್ಸಿಯವರ ಭಾರತ ಪ್ರವಾಸವನ್ನು ‘ಗೋಟ್ ಟೂರ್’ (ಸಾರ್ವಕಾಲಿಕ ಶ್ರೇಷ್ಠ ಪ್ರವಾಸ) ಎಂದು ಕರೆಯಲಾಗಿದೆ. ಮುಂದಿನ 72 ಗಂಟೆಗಳಲ್ಲಿ ಅಂದರೆ ಮೂರು ದಿನಗಳ ವರೆಗೆ ಭಾರತದಲ್ಲಿ ಮೆಸ್ಸಿ ಇರಲಿದ್ದಾರೆ. ಈ ವೇಳೆ ಮೆಸ್ಸಿ ನಾಲ್ಕು ಪ್ರಮುಖ ನಗರಗಳಾದ ಕೋಲ್ಕತ್ತಾ, ಹೈದರಾಬಾದ್, ಮುಂಬೈ ಮತ್ತು ದೆಹಲಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಮುಖ್ಯಮಂತ್ರಿಗಳು, ಕಾರ್ಪೊರೇಟ್ ನಾಯಕರು, ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಹೀಗೆ ಲಿಯೋನಲ್‌ ಮೆಸ್ಸಿ ತಮ್ಮ ಭಾರತ ಪ್ರವಾಸವನ್ನು ಅದ್ದೂರಿಯಾಗಿ ಪೂರ್ಣಗೊಳಿಸಲಿದ್ದಾರೆ.

Tags:
error: Content is protected !!