ಹೊಸದಿಲ್ಲಿ : ದೇಶದ ಹಲವು ಭಾಗಗಳಲ್ಲಿ ಆಗಸ್ಟ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿ ಭಾರಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಸೆಪ್ಟೆಂಬರ್‌ನಲ್ಲೂ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ.
ದೇಶದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ ಮತ್ತಷ್ಟು ಪ್ರವಾಹ ಹಾಗೂ ಭೂಕುಸಿತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಸೆಪ್ಟೆಂಬರ್ 2025ರ ಮಾಸಿಕ ಸರಾಸರಿ ಮಳೆಯು ದೀರ್ಘಾವಧಿಯ ಸರಾಸರಿ 167.9 ಮಿಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಎಂದಿದೆ. ಹೆಚ್ಚಿನ ಪ್ರದೇಶಗಳು ಸಾಮಾನ್ಯ, ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ಪಡೆಯುತ್ತವೆ ಎಂದು ಹವಮಾನ ಇಲಾಖೆ ಹೇಳಿದೆ.
ಆದಾಗ್ಯೂ, ಈಶಾನ್ಯ ಮತ್ತು ಪೂರ್ವದ ಕೆಲವು ಪ್ರದೇಶಗಳು, ಹಾಗೆಯೇ ದಕ್ಷಿಣ ಪರ್ಯಾಯ ದ್ವೀಪ ಭಾರತದ ಅನೇಕ ಭಾಗಗಳು ಹಾಗೂ ವಾಯುವ್ಯ ಭಾರತದ ಕೆಲವು ಭಾಗಗಳು ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.





