ದೇಶ- ವಿದೇಶ

ಸೆಪ್ಟಂಬರ್‌ನಲ್ಲೂ ಹೆಚ್ಚು ಮಳೆ : ಪ್ರವಾಹ, ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಿದ ಹವಮಾನ ಇಲಾಖೆ

ಹೊಸದಿಲ್ಲಿ : ದೇಶದ ಹಲವು ಭಾಗಗಳಲ್ಲಿ ಆಗಸ್ಟ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿ ಭಾರಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಸೆಪ್ಟೆಂಬರ್‌ನಲ್ಲೂ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ.

ದೇಶದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ ಮತ್ತಷ್ಟು ಪ್ರವಾಹ ಹಾಗೂ ಭೂಕುಸಿತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಸೆಪ್ಟೆಂಬರ್ 2025ರ ಮಾಸಿಕ ಸರಾಸರಿ ಮಳೆಯು ದೀರ್ಘಾವಧಿಯ ಸರಾಸರಿ 167.9 ಮಿಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಎಂದಿದೆ. ಹೆಚ್ಚಿನ ಪ್ರದೇಶಗಳು ಸಾಮಾನ್ಯ, ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ಪಡೆಯುತ್ತವೆ ಎಂದು ಹವಮಾನ ಇಲಾಖೆ ಹೇಳಿದೆ.

ಆದಾಗ್ಯೂ, ಈಶಾನ್ಯ ಮತ್ತು ಪೂರ್ವದ ಕೆಲವು ಪ್ರದೇಶಗಳು, ಹಾಗೆಯೇ ದಕ್ಷಿಣ ಪರ್ಯಾಯ ದ್ವೀಪ ಭಾರತದ ಅನೇಕ ಭಾಗಗಳು ಹಾಗೂ ವಾಯುವ್ಯ ಭಾರತದ ಕೆಲವು ಭಾಗಗಳು ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

6 mins ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

15 mins ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

23 mins ago

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

1 hour ago

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

1 hour ago

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

2 hours ago