ದೇಶ- ವಿದೇಶ

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ ವಿಮಾನವು ಸುಮಾರು ಏಳು ಗಂಟೆಗಳ ಕಾಲ ಹಾರಾಟ ನಡೆಸಿ, ಬಳಿಕ ಯು-ಟರ್ನ್ ಮಾಡಿ ಮರಳಿ ದೆಹಲಿಗೆ ತಿರುಗಿರುವ ಘಟನೆ ನಡೆದಿದೆ.

ವಿಮಾನವು ಸುಮಾರು 7 ಗಂಟೆ ಹಾರಾಟದ ನಂತರ ಇಥಿಯೋಪಿಯಾ-ಎರಿತ್ರಿಯಾ ಗಡಿಯ ಸಮೀಪ ತಿರುಗಿ ಬಂದಿದೆ.

ಇಂಡಿಗೋ ವಿಮಾನ ಸಂಖ್ಯೆ 6E33 (Boeing 787-9 ಡ್ರೀಮ್‌ಲೈನರ್) ಫ್ಲೈಟ್ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ ಹೊರಟಿ ಪರ್ಷಿಯನ್ ಗಲ್ಫ್ ಪ್ರದೇಶವನ್ನು ಪೂರ್ಣವಾಗಿ ತಪ್ಪಿಸಿ ಆಫ್ರಿಕಾ ಮಾರ್ಗವನ್ನು ಆಯ್ಕೆ ಮಾಡಿತ್ತು. ಆದರೆ ಇಥಿಯೋಪಿಯಾ ಗಡಿಯ ಹತ್ತಿರ ತಲುಪಿದಾಗ ಎರಿತ್ರಿಯಾ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿದ್ದರಿಂದ ಮುಂದುವರಿಯಲು ಸಾಧ್ಯವಾಗಿಲ್ಲ. ಬಳಿಕ ಹಠಾತ್‌ ಯು-ಟರ್ನ್‌ ಮಾಡಿ ದೆಹಲಿಗೆ ಮರಳಿದೆ.

ಇಂಡಿಗೋ ಅಧಿಕೃತ ಹೇಳಿಕೆ
6E33 ವಿಮಾನವು ಮಧ್ಯಪ್ರಾಚ್ಯದ ಪರಿಸ್ಥಿತಿಯಿಂದಾಗಿ ತುರ್ತು ವಾಯುಪ್ರದೇಶ ನಿರ್ಬಂಧಗಳ ಕಾರಣ ದೆಹಲಿಗೆ ಮರಳಬೇಕಾಯಿತು. ಪ್ರಯಾಣಿಕರ ಸುರಕ್ಷತೆಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲಾಗುವುದಿಲ್ಲ.” ಎರಿತ್ರಿಯಾ ಅಧಿಕಾರಿಗಳಿಂದ ಅನುಮತಿ ಪಡೆಯಲು ಸಾಧ್ಯವಾಗದ ಕಾರಣ ರಿಸ್ಕ್ ಅಸೆಸ್‌ಮೆಂಟ್ ನಂತರ ತಿರುಗಿ ಬರಲು ನಿರ್ಧರಿಸಲಾಗಿದೆ ಎಂದು ಹೇಳಿದೆ.

ಫೆಬ್ರವರಿ 28ರಿಂದ ಮಾರ್ಚ್ 3ರವರೆಗೆ ಮಧ್ಯಪ್ರಾಚ್ಯದಲ್ಲಿ ವಾಯುಪ್ರದೇಶ ನಿರ್ಬಂಧಗಳಿಂದಾಗಿ ಇಂಡಿಗೋ 500ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿತ್ತು. ಇದು ಫೆಬ್ರವರಿ 26ರ ನಂತರದ ಮೊದಲ ದೆಹಲಿ-ಮ್ಯಾಂಚೆಸ್ಟರ್ ವಿಮಾನವಾಗಿತ್ತು. ಪ್ರಯಾಣಿಕರು ಸುಮಾರು 7 ಗಂಟೆಗಳ ಹಾರಾಟದ ನಂತರ ಮತ್ತೆ ದೆಹಲಿ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ.

ಪ್ರಯಾಣಿಕರಿಗೆ ತೊಂದರೆಯಾಗಿರುವುದಕ್ಕೆ ಇಂಡಿಗೋ ಕ್ಷಮೆ ಯಾಚಿಸಿದ್ದು, ಮುಂದಿನ ವಿಮಾನಗಳ ವ್ಯವಸ್ಥೆ ಮಾಡುವುದಾಗಿ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

2 mins ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

9 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

15 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

14 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

16 hours ago