ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ.
ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು ಮುಚ್ಚಲಾಗುವುದು ಎಂದು ಐಆರ್‌ಜಿಸಿ ಇರಾನ್ ಹೇಳಿದೆ.
ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಗೆ ಪ್ರತಿಯಾಗಿ ಅಮೇರಿಕಾ ಇಂದು ಮುಂಜಾನೆ ಇರಾನ್‌ನ ಸುಮಾರು 140 ಕಡೆ ಭಾರೀ ವೈಮಾನಿಕ ದಾಳಿ ನಡೆಸಿದೆ.
ಇದಕ್ಕೆ ಪ್ರತಿಯಾಗಿ ಇರಾನ್ ಬಹ್ರೇನ್, ಕತಾರ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ ಕಡೆಗೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿರುವುದಾಗಿ ಹೇಳಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ತೀವ್ರಗೊಂಡಿದೆ.




