Mysore
25
broken clouds

Social Media

ಗುರುವಾರ, 16 ಏಪ್ರಿಲ 2026
Light
Dark

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ 250 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಕಾಣೆಯಾದ ಜನರನ್ನು ಪತ್ತೆಹಚ್ಚಲು ಅಂಡಮಾನ್‌ ಸಮುದ್ರದಲ್ಲಿ ಬೃಹತ್‌ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ದಕ್ಷಿಣ ಬಾಂಗ್ಲಾದೇಶದ ಟೆಕ್ನಾಫ್‌ನಿಂದ ಹೊರಟ ಹಡಗು ಮಲೇಷ್ಯಾಗೆ ತೆರಳುತ್ತಿತ್ತು ಎಂದು ವರದಿಯಾಗಿದೆ. ಆದರೆ ಭಾರೀ ಗಾಳಿ ಮತ್ತು ತೀವ್ರ ಜನದಟ್ಟಣೆ ದುರಂತಕ್ಕೆ ಕಾರಣವಾಯಿತು ಎನ್ನಲಾಗಿದೆ. ಕಾಣೆಯಾದ ಪ್ರಯಾಣಿಕರಲ್ಲಿ ಮಹಿಳೆಯರು ಮತ್ತು ಮಕ್ಕಳೇ  ಹೆಚ್ಚಾಗಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!