ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದಾರೆ. ಮುಂಜಾನೆ ಸುಮಾರು ೪ ಗಂಟೆಯ ವೇಳೆಗೆ ದಾಳಿ ನಡೆದಿದೆ ಎಂದು ವರದಿ ತಿಳಿಸಿವೆ. ಈ ವೇಳೆ ಭದ್ರತಾ ಸಿಬ್ಬದಿ ಕೂಡ ಉಗ್ರರರ ಮೇಲೆ ಪ್ರತಿದಾಳಿ ನಡೆಸಿದ್ದಾರೆ. ಸದ್ಯ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯುತ್ತಿದೆ. ಘಟನೆ ಬಳಿಕ ಭದ್ರತಾ ಪಡೆಗಳು ಭಯೋತ್ಪಾದಕರಿಗಾಗಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.