Mysore
34
few clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ ನಡೆದಿದೆ.

ಲಾಕ್‌ಹೀಡ್‌ ಮಾರ್ಟಿನ್‌ ನಿರ್ಮಿತ ಹರ್ಕ್ಯುಲಸ್‌ ಸಿ 130 ವಿಮಾನವು ಪೆರುವಿನ ಗಡಿಯಲ್ಲಿರುವ ಪೊರ್ಟೋ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಕೊಲಂಬಿಯಾದ ರಕ್ಷಣಾ ಸಚಿವ ಪೆಡ್ರೋ ಸ್ಯಾಂಚೆಜ್‌ ತಿಳಿಸಿದ್ದಾರೆ.

ನಗರ ಕೇಂದ್ರದಿಂದ ಕೇವಲ 3 ಕಿ.ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ. ದುರಂತದಲ್ಲಿ 48 ಜನರು ಗಾಯಗೊಂಡಿದ್ದಾರೆ.

Tags:
error: Content is protected !!