Mysore
28
few clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಭೇಟಿಯಾದ ಸಚಿವ ಕೆ.ಎಚ್‌.ಮುನಿಯಪ್ಪ

ಹೊಸದಿಲ್ಲಿ: ಸಚಿವ ಕೆ.ಹೆಚ್. ಮುನಿಯಪ್ಪ ಅವರು ಒಳಮೀಸಲಾತಿ ಜಾರಿ ಕುರಿತು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ಈ ಕುರಿತು ಇಂದು(ನ.26) ಹೊಸದಿಲ್ಲಿ ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿರುವ ಅವರು, ಸುಪ್ರೀಂಕೋರ್ಟ್‌ ಒಳ ಮೀಸಲಾತಿ ಕುರಿತು ಐತಿಹಾಸಿಕ ತೀರ್ಪು ನೀಡಿದೆ. ಈ ತೀರ್ಪಿನ ಅನ್ವಯ
ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳಿವೆ. ಅವುಗಳನ್ನು ಸಮವಾಗಿ ಹಂಚುವುದು ನಮ್ಮ ಸರ್ಕಾರದ ಮೂಲ ಉದ್ದೇಶವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ನಿವೃತ್ತ ನ್ಯಾಯಾಧೀಶ ನಾಗಮೋಹನ್‌ ದಾಸ ಅವರ ನೇತೃತ್ವದ ಆರೋಗವನ್ನು ರಚಿಸಿದ್ದು, ಮೂರು ತಿಂಗಳೊಳಗಾಗಿ ವರದಿಗಳನ್ನು ಪಡೆದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಜಾರಿಗೊಳಿಸಲು ಬದ್ದರಾಗಿದ್ದೇವೆ ಎಂದು ಹೇಳಿದ್ದಾರೆ.

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯವರು ಇದೇ ವೇಳೆ ಪ್ರತಿಕ್ರಿಯೆ ನೀಡಿ, 75 ವರ್ಷಗಳಿಂದ ಶೋಷಿತರಲ್ಲಿ ಶೋಷಿತರಾಗಿರುವ ಸಮುದಾಯಗಳಿಗೆ ನ್ಯಾಯ ಸಿಗುವ ಕಾಲ ಬಂದಿದೆ. ಎಲ್ಲಾ ಜಾತಿಗಳಿಗೂ ಸಮವಾಗೊ ಒಳಮೀಸಲಾತಿ ಹಂಚಿಕೆ ಮಾಡುವ ಮೂಲಕ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವುದು ಅತ್ಯವಶ್ಯಕ ಎಂದು ತಿಳಿಸಿದ್ದಾರೆ.

Tags:
error: Content is protected !!