ಹೊಸದಿಲ್ಲಿ: ಸಚಿವ ಕೆ.ಹೆಚ್. ಮುನಿಯಪ್ಪ ಅವರು ಒಳಮೀಸಲಾತಿ ಜಾರಿ ಕುರಿತು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ಈ ಕುರಿತು ಇಂದು(ನ.26) ಹೊಸದಿಲ್ಲಿ ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿರುವ ಅವರು, ಸುಪ್ರೀಂಕೋರ್ಟ್ ಒಳ ಮೀಸಲಾತಿ ಕುರಿತು ಐತಿಹಾಸಿಕ ತೀರ್ಪು ನೀಡಿದೆ. ಈ ತೀರ್ಪಿನ ಅನ್ವಯ
ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳಿವೆ. ಅವುಗಳನ್ನು ಸಮವಾಗಿ ಹಂಚುವುದು ನಮ್ಮ ಸರ್ಕಾರದ ಮೂಲ ಉದ್ದೇಶವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ ಅವರ ನೇತೃತ್ವದ ಆರೋಗವನ್ನು ರಚಿಸಿದ್ದು, ಮೂರು ತಿಂಗಳೊಳಗಾಗಿ ವರದಿಗಳನ್ನು ಪಡೆದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಜಾರಿಗೊಳಿಸಲು ಬದ್ದರಾಗಿದ್ದೇವೆ ಎಂದು ಹೇಳಿದ್ದಾರೆ.
ತೆಲಂಗಾಣ ಸಿಎಂ ರೇವಂತ್ ರೆಡ್ಡಿಯವರು ಇದೇ ವೇಳೆ ಪ್ರತಿಕ್ರಿಯೆ ನೀಡಿ, 75 ವರ್ಷಗಳಿಂದ ಶೋಷಿತರಲ್ಲಿ ಶೋಷಿತರಾಗಿರುವ ಸಮುದಾಯಗಳಿಗೆ ನ್ಯಾಯ ಸಿಗುವ ಕಾಲ ಬಂದಿದೆ. ಎಲ್ಲಾ ಜಾತಿಗಳಿಗೂ ಸಮವಾಗೊ ಒಳಮೀಸಲಾತಿ ಹಂಚಿಕೆ ಮಾಡುವ ಮೂಲಕ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವುದು ಅತ್ಯವಶ್ಯಕ ಎಂದು ತಿಳಿಸಿದ್ದಾರೆ.
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…