ಕೇರಳ/ತಿರುವನಂತಪುರ: ತಪ್ಪು ದಾರಿಗೆ ಎಳೆಯುವ ಜಾಹೀರಾತು ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ ಎಂದು ಲೈವ್ ಲಾ ವರದಿ ನೀಡಿದೆ.
ಆಚಾರ್ಯ ಬಾಲಕೃಷ್ಣ ಅವರು ಇಂಗ್ಲೀಷ್ ಮತ್ತು ಮಲಯಾಳಂ ಪತ್ರಿಕೆಗಳಲ್ಲಿ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದ ಮೇಲೆ ದಿವ್ಯಾ ಫಾರ್ಮಸಿ ವಿರುದ್ಧ ಕೇರಳದ ಡ್ರಗ್ಸ್ ಇನ್ಸ್‌ಪೆಕ್ಟರ್ ಅವರು ಪ್ರಕರಣ ದಾಖಲಿಸಿದ್ದರು.
ಈ ಕುರಿತು ಫೆಬ್ರವರಿ.1 ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಆರೋಪಿಗಳಿಗೆ ಸೂಚಿಸಿತ್ತು. ಆದರೆ ಆರೋಪಿಗಳು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಅನ್ನು ಜಾರಿಗೊಳಿಸಿದೆ.
ಜಾಹೀರಾತು ಏನು?
ಪತಂಜಲಿ ಆಯುರ್ವೇದ ಕಂಪೆನಿಯೂ ತಾನು ತಯಾರಿಸುವ ಔಷಧಿಗಳು ಹಲವು ಕಾಯಿಲೆಗಳನ್ನು ವಾಸಿ ಮಾಡುತ್ತದೆ ಎಂದು ಜಾಹೀರಾತಿನಲ್ಲಿ ಪ್ರಚಾರ ಮಾಡಿತ್ತು.