ದೇಶ- ವಿದೇಶ

ತಪ್ಪು ದಾರಿಗೆ ಎಳೆಯುವ ಜಾಹೀರಾತು: ಬಾಬಾ ರಾಮ್‌ದೇವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ

ಕೇರಳ/ತಿರುವನಂತಪುರ: ತಪ್ಪು ದಾರಿಗೆ ಎಳೆಯುವ ಜಾಹೀರಾತು ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್‌ದೇವ್‌ ಮತ್ತು ಪತಂಜಲಿ ಆಯುರ್ವೇದ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯ ಜಾಮೀನು ರಹಿತ ವಾರೆಂಟ್‌ ಹೊರಡಿಸಿದೆ ಎಂದು ಲೈವ್‌ ಲಾ ವರದಿ ನೀಡಿದೆ.

ಆಚಾರ್ಯ ಬಾಲಕೃಷ್ಣ ಅವರು ಇಂಗ್ಲೀಷ್‌ ಮತ್ತು ಮಲಯಾಳಂ ಪತ್ರಿಕೆಗಳಲ್ಲಿ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದ ಮೇಲೆ ದಿವ್ಯಾ ಫಾರ್ಮಸಿ ವಿರುದ್ಧ ಕೇರಳದ ಡ್ರಗ್ಸ್‌ ಇನ್ಸ್‌ಪೆಕ್ಟರ್‌ ಅವರು ಪ್ರಕರಣ ದಾಖಲಿಸಿದ್ದರು.

ಈ ಕುರಿತು ಫೆಬ್ರವರಿ.1 ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಆರೋಪಿಗಳಿಗೆ ಸೂಚಿಸಿತ್ತು. ಆದರೆ ಆರೋಪಿಗಳು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ಬಂಧನ ವಾರೆಂಟ್‌ ಅನ್ನು ಜಾರಿಗೊಳಿಸಿದೆ.

ಜಾಹೀರಾತು ಏನು?

ಪತಂಜಲಿ ಆಯುರ್ವೇದ ಕಂಪೆನಿಯೂ ತಾನು ತಯಾರಿಸುವ ಔಷಧಿಗಳು ಹಲವು ಕಾಯಿಲೆಗಳನ್ನು ವಾಸಿ ಮಾಡುತ್ತದೆ ಎಂದು ಜಾಹೀರಾತಿನಲ್ಲಿ ಪ್ರಚಾರ ಮಾಡಿತ್ತು.

ಅರ್ಚನ ಎಸ್‌ ಎಸ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago