ದೇಶ- ವಿದೇಶ

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ ಅಮೆರಿಕ ಮತ್ತು ಇಸ್ರೇಲ್ ಇರಾನ್‌ನ ಅಣುಸ್ಥಾವರಗಳ ಮೇಲೆ ಗಂಭೀರ ದಾಳಿ ಮಾಡಿದೆ.

ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಬಳಿ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಠ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ದಕ್ಷಿಣ ಇರಾನ್‌ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಶನಿವಾರ ಅಮೆರಿಕ-ಇಸ್ರೇಲ್ ದಾಳಿ ನಡೆಸಿದೆ. ಇದಕ್ಕೂ ಮೊದಲು, ಇರಾನ್‌ನ ನೈಋತ್ಯ ಖುಜೆಸ್ತಾನ್ ಪ್ರಾಂತ್ಯದ ಮಹ್‌ಶಹರ್ ಪೆಟ್ರೋಕೆಮಿಕಲ್ ವಲಯದ ಮೇಲೆ ನಡೆದಿದ್ದ ದಾಳಿಯಲ್ಲಿ ಐವರು ಗಾಯಗೊಂಡಿದ್ದರು.

ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಆವರಣದ ಬಳಿ ಒಂದು ಕ್ಷಿಪಣಿ ಅಪ್ಪಳಿಸಿದ ಬಗ್ಗೆ ಇರಾನ್‌ನಿಂದ ಮಾಹಿತಿ ಪಡೆಯಲಾಗಿದೆ ಎಂದು ಅಂತರರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆ (ಐಎಇಎ) ಶನಿವಾರ ತಿಳಿಸಿದೆ. ಸೈಟ್‌ನ ಭೌತಿಕ ರಕ್ಷಣಾ ಸಿಬ್ಬಂದಿಗಳಲ್ಲಿ ಒಬ್ಬರು ‘ಪ್ರೊಜೆಕ್ಟ್ತ್ಯೈಲ್ ತುಣುಕಿನಿಂದ’ ಸಾವನ್ನಪ್ಪಿದ್ದಾರೆ ಮತ್ತು ಸೈಟ್‌ನಲ್ಲಿರುವ ಕಟ್ಟಡವು ಆಘಾತ ತರಂಗಗಳು ಮತ್ತು ತುಣುಕುಗಳಿಂದ ಪ್ರಭಾವಿತವಾಗಿದೆ ಎಂದು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.

ವಿಕಿರಣ ಸೋರಿಕೆಯಾಗಿಲ್ಲ
ಇದೇ ವೇಳೆ ಘಟನಾ ಸ್ಥಳದಲ್ಲಿ ಯಾವುದೇ ರೀತಿಯ ವಿಕಿರಣ ಸೋರಿಕೆಯಾಗಿಲ್ಲ. ವಿಕಿರಣ ಮಟ್ಟದಲ್ಲಿ ಯಾವುದೇ ಹೆಚ್ಚಳ ವರದಿಯಾಗಿಲ್ಲ ಎಂದೂ ಐಎಇಎ ಹೇಳಿದೆ. ಅಲ್ಲದೆ ಈ ಘಟನೆಯು ಸ್ಥಾವರದ ಮುಖ್ಯ ಭಾಗಗಳಿಗೆ ಹಾನಿಯಾಗಿಲ್ಲ ಮತ್ತು ಉತ್ಪಾದನೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಹೇಳಿದೆ.

 

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

2 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

2 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

2 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

3 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

4 hours ago

ಮಡಿಕೇರಿ | ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…

4 hours ago