ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ ಅಮೆರಿಕ ಮತ್ತು ಇಸ್ರೇಲ್ ಇರಾನ್‌ನ ಅಣುಸ್ಥಾವರಗಳ ಮೇಲೆ ಗಂಭೀರ ದಾಳಿ ಮಾಡಿದೆ.
ಇರಾನ್‌ನ ಬುಶೆಹರ್ ಪರಮಾಣು ಸ್ಥಾವರದ ಬಳಿ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಠ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ದಕ್ಷಿಣ ಇರಾನ್‌ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಶನಿವಾರ ಅಮೆರಿಕ-ಇಸ್ರೇಲ್ ದಾಳಿ ನಡೆಸಿದೆ. ಇದಕ್ಕೂ ಮೊದಲು, ಇರಾನ್‌ನ ನೈಋತ್ಯ ಖುಜೆಸ್ತಾನ್ ಪ್ರಾಂತ್ಯದ ಮಹ್‌ಶಹರ್ ಪೆಟ್ರೋಕೆಮಿಕಲ್ ವಲಯದ ಮೇಲೆ ನಡೆದಿದ್ದ ದಾಳಿಯಲ್ಲಿ ಐವರು ಗಾಯಗೊಂಡಿದ್ದರು.
ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಆವರಣದ ಬಳಿ ಒಂದು ಕ್ಷಿಪಣಿ ಅಪ್ಪಳಿಸಿದ ಬಗ್ಗೆ ಇರಾನ್‌ನಿಂದ ಮಾಹಿತಿ ಪಡೆಯಲಾಗಿದೆ ಎಂದು ಅಂತರರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆ (ಐಎಇಎ) ಶನಿವಾರ ತಿಳಿಸಿದೆ. ಸೈಟ್‌ನ ಭೌತಿಕ ರಕ್ಷಣಾ ಸಿಬ್ಬಂದಿಗಳಲ್ಲಿ ಒಬ್ಬರು ‘ಪ್ರೊಜೆಕ್ಟ್ತ್ಯೈಲ್ ತುಣುಕಿನಿಂದ’ ಸಾವನ್ನಪ್ಪಿದ್ದಾರೆ ಮತ್ತು ಸೈಟ್‌ನಲ್ಲಿರುವ ಕಟ್ಟಡವು ಆಘಾತ ತರಂಗಗಳು ಮತ್ತು ತುಣುಕುಗಳಿಂದ ಪ್ರಭಾವಿತವಾಗಿದೆ ಎಂದು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.
ವಿಕಿರಣ ಸೋರಿಕೆಯಾಗಿಲ್ಲ
ಇದೇ ವೇಳೆ ಘಟನಾ ಸ್ಥಳದಲ್ಲಿ ಯಾವುದೇ ರೀತಿಯ ವಿಕಿರಣ ಸೋರಿಕೆಯಾಗಿಲ್ಲ. ವಿಕಿರಣ ಮಟ್ಟದಲ್ಲಿ ಯಾವುದೇ ಹೆಚ್ಚಳ ವರದಿಯಾಗಿಲ್ಲ ಎಂದೂ ಐಎಇಎ ಹೇಳಿದೆ. ಅಲ್ಲದೆ ಈ ಘಟನೆಯು ಸ್ಥಾವರದ ಮುಖ್ಯ ಭಾಗಗಳಿಗೆ ಹಾನಿಯಾಗಿಲ್ಲ ಮತ್ತು ಉತ್ಪಾದನೆಯ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಹೇಳಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…