ಮಾಸ್ಕೋ: ನಾಪತ್ತೆಯಾಗಿದ್ದ ರಷ್ಯಾದ ಎಂಐ-8ಟಿ ಹೆಲಿಕಾಪ್ಟರ್ ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದ ಬಳಿ ಪತ್ತೆಯಾಗಿದೆ. ಹೆಲಿಕಾಪ್ಟರ್‌ನಲ್ಲಿದ್ದ 22 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
22 ಜನರನ್ನು ಹೊತ್ತ ರಷ್ಯಾದ ಎಂಐ-8ಟಿ ಹೆಲಿಕಾಪ್ಟರ್ ವಚ್ಚಜೆಟ್ಸ್ ವಾಲ್ಕೆನೊ ಎಂಬಲ್ಲಿಂದ ಹೊರಟು ನಾಪತ್ತೆಯಾಗಿತ್ತು. ಇದಾದ ಒಂದು ತಿಂಗಳ ಬಳಿಕ ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದಲ್ಲಿ ಪತನಗೊಂಡಿರುವುದು ಗೊತ್ತಾಗಿದೆ.
ಅದಕ್ಕೆ ಪೂರಕವಾಗಿ ಹೆಲಿಕಾಪ್ಟರ್‌ನ ಅವಶೇಷಗಳು ಅಲ್ಲಿ ಸಿಕ್ಕಿದ್ದು, ಹೆಲಿಕಾಪ್ಟರ್‌ನಲ್ಲಿದ್ದ 22 ಮಂದಿಯೂ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮಾಸ್ಕೋದಿಂದ ಸುಮಾರು 7,100 ಕಿ.ಮೀ ಕಮ್ಚಟ್ಕಾದ ಪೂರ್ವ ಪರ್ಯಾಯ ದ್ವೀಪದಲ್ಲಿ ವಾರಾದ್ಯಂತದಲ್ಲಿ ಮಳೆ, ಗಾಳಿಯೊಂದಿಗೆ ಚಂಡಮಾರುತ ಹೆಚ್ಚಾಗಿತ್ತು. ಈ ಕಾರಣದಿಂದಾಗಿ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ.
ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…
ಮೈಸೂರು : ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…