ಮುಂಬೈ: ದೆಹಲಿಯ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಅವರನ್ನು ಬಿಸಿಸಿಐನ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಮುಂಬೈನಲ್ಲಿಂದು ನಡೆದ ವಾರ್ಷಿಕ ಸಾಮಾನ್ಯ ಸಭೆ ಮುಕ್ತಾಯದ ನಂತ ಮನ್ಹಾಸ್ ಅವರನ್ನು ಹೊಸ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ.
ರೋಜರ್ ಬಿನ್ನಿ ಅವರ ಸ್ಥಾನದಲ್ಲಿ ಮನ್ಹಾಸ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮಾಜಿ ಕ್ರಿಕೆಟಿಗ ರಾಜೀವ್ ಶುಕ್ಲಾ ಅವರನ್ನು ಉಪಾಧ್ಯಕ್ಷರನ್ನಾಗಿ, ದೇವಜಿತ್ ಸೈಕಿಯಾ ಅವರನ್ನು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ:-ಚಾಮುಂಡಿಬೆಟ್ಟದಲ್ಲಿ ಸರಣಿ ಅಪಘಾತ ಪ್ರಕರಣ: ಓರ್ವ ವ್ಯಕ್ತಿ ಸಾವು
ಇದಲ್ಲದೇ ಪ್ರಭತೇಜ್ ಸಿಂಗ್ ಭಾಟಿಯಾ ಜಂಟಿ ಕಾರ್ಯದರ್ಶಿಯಾಗಿ, ಎ.ರಘುರಾಮ್ ಭಟ್ ಮಂಡಳಿಯ ಖಜಾಂಚಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.





