ದೇಶ- ವಿದೇಶ

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗೆ ಸೇರಿದ ನೌಕರರು ಮತ್ತು ಕಾರ್ಮಿಕರು ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಷ್ಕರದಿಂದಾಗಿ ಹಲವು ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ.

ಹೊಸ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಇದಕ್ಕಾಗಿ 30 ಕೋಟಿ ಕಾರ್ಮಿಕರನ್ನು ಸಜ್ಜುಗೊಳಿಸಲಾಗಿತ್ತು ಎಂದು ಕಾರ್ಮಿಕ ಸಂಘಗಳ ಜಂಟಿ ವೇದಿಕೆ ತಿಳಿಸಿದೆ. ಈ ಕುರಿತು ಮಾತನಾಡಿರುವ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್, ದೇಶಾದ್ಯಂತ ಸಾರ್ವತ್ರಿಕ ಮುಷ್ಕರ ಕರೆ ನೀಡಲಾಗಿತ್ತು. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದರು.

ಅಸ್ಸಾಂ, ತಮಿಳುನಾಡು, ಪಾಂಡಿಚೇರಿ, ಕೇರಳ, ಒಡಿಶಾ ಮತ್ತು ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು. ಸಂಚಾರ ವ್ಯವಸ್ಥೆ ಮೇಲೆ ಬಂದ್ ಪರಿಣಾಮ ಬೀರಿದೆ ಎಂದರು.

ಭಾರತೀಯ ಕಾರ್ಮಿಕ ಸಂಘಗಳ ಒಕ್ಕೂಟ (ಸಿಐಟಿಯು), ಅಖಿಲ ಭಾರತ ಕಾರ್ಮಿಕ ಸಂಘಗಳ ಕಾಂಗ್ರೆಸ್ (ಎಐಟಿಯುಸಿ), ಭಾರತೀಯ ರಾಷ್ಟ್ರೀಯ ಕಾರ್ಮಿಕ ಸಂಘಗಳ ಕಾಂಗ್ರೆಸ್ (ಐಎನ್‌ಟಿಯುಸಿ), ಹಿಂದ್ ಮಜ್ದೂರ್ ಸಭಾ (ಎಚ್‌ಎಂಎಸ್) ಮತ್ತು ಇತರ ಹಲವಾರು ಪ್ರಮುಖ ಕಾರ್ಮಿಕ ಸಂಘಗಳು ಜಂಟಿಯಾಗಿ ಬಂದ್‌ಗೆ ಕರೆಕೊಟ್ಟಿದ್ದವು.

ಹೊಸದಿಲ್ಲಿ ವರದಿ
ಬಂದ್ ಹಿನ್ನೆಲೆಯಲ್ಲಿ ನವದೆಹಲಿಯ ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಪರಿಣಾಮವಾಗಿ, ರಸ್ತೆಗಳಲ್ಲಿ ಸಂಚಾರ ಕಡಿಮೆಯಾಗಿತ್ತು. ಬ್ಯಾಂಕಿಂಗ್, ವಿಮೆ, ಅಂಚೆ, ಸಾರಿಗೆ, ಆರೋಗ್ಯ, ಕಲ್ಲಿದ್ದಲು ಮತ್ತು ಕಲ್ಲಿದ್ದಲೇತರ ಗಣಿಗಳು, ಅನಿಲ ಪೈಪ್‌ಲೈನ್ ಸೇರಿದಂತೆ ಹಲವು ಕ್ಷೇತ್ರಗಳ ಮೇಲೆ ಬಂದ್ ಪರಿಣಾಮ ಬೀರಿತ್ತು.

ತಮಿಳುನಾಡು, ಕೇರಳ ವರದಿ
ಬಂದ್ ಪರಿಣಾಮವಾಗಿ ತಮಿಳುನಾಡು, ಕೇರಳದಲ್ಲಿ ಬಸ್ ಸಂಚಾರ ವ್ಯತ್ಯಯವಾಗಿತ್ತು. ಡಿಎಂಕೆ ಸರ್ಕಾರ ಬಂದ್ ಬೆಂಬಲಿಸಿದೆ. ಒಡಿಶಾದ ಭುವನೇಶ್ವದಲ್ಲಿಯೂ ಬಂದ್ ಬೆಂಬಲಿಸಿ, ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಗೋವಾ ವರದಿ
ಗೋವಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬ್ಯಾಂಕಿಂಗ್ ಕಾರ್ಯಾಚರಣೆಗಳ ಮೇಲೆ ಬಂದ್ ಪರಿಣಾಮ ಬೀರಿದೆ. ಇತರೆ ಅಗತ್ಯ ಸೇವೆಗಳ ಮೇಲೆ ಹೆಚ್ಚು ಪರಿಣಾಮವಾಗಿಲ್ಲ. ಮುಷ್ಕರ ಬೆಂಬಲಿಸಿ ಕಾರ್ಮಿಕ ಸಂಘಗಳು ವಿವಿಧ ಕೈಗಾರಿಕಾ ಎಸ್ಟೇಟ್‌ಗಳಲ್ಲಿ ಕೆಲಸ ಸ್ಥಗಿತಗೊಳಿಸಿವೆ.

ಪಶ್ಚಿಮ ಬಂಗಾಳ ವರದಿ
ಪಶ್ಚಿಮ ಬಂಗಾಳದಲ್ಲಿ ಬಂದ್ ಜನಜೀವನದ ಮೇಲೆ ಹೆಚ್ಚು ಪರಿಣಾಮ ಬೀರಿಲ್ಲ. ಕೇಂದ್ರ ಮತ್ತು ರಾಜ್ಯ ನಾಗರಿಕ ಸೇವೆಗಳ ನೌಕರರು ಮತ್ತು ಶಿಕ್ಷಕರು, ಕೇಂದ್ರ ಮತ್ತು ರಾಜ್ಯ ಸಾರ್ವಜನಿಕ ವಲಯದ ಸಂಸ್ಥೆಗಳ ಕಾರ್ಮಿಕರ ಗುಂಪುಗಳು ಮತ್ತು ಸ್ವತಂತ್ರ ಕಾರ್ಮಿಕ ಸಂಘಗಳು ಬಂದ್ ಕರೆಗೆ ಬೆಂಬಲ ನೀಡಿವೆಯಾದರೂ, ಜನ ಜೀವನಕ್ಕೆ ತೊಂದರೆಯಾಗಿಲ್ಲ. ವಾಹನ ಸಂಚಾರವೂ ಎಂದಿನಂತಿತ್ತು.

ಮಧ್ಯ ಪ್ರದೇಶ ವರದಿ
ಮಧ್ಯ ಪ್ರದೇಶದಲ್ಲಿ ರಕ್ಷಣಾ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 25,000ಕ್ಕೂ ಹೆಚ್ಚು ನೌಕರರು ಒಂದು ಗಂಟೆ ತಡವಾಗಿ ಕೆಲಸಕ್ಕೆ ಹಾಜರಾದರು ಎಂದು ಅಖಿಲ ಭಾರತ ರಕ್ಷಣಾ ನೌಕರರ ಒಕ್ಕೂಟ ತಿಳಿಸಿದೆ.

ಬೇಡಿಕೆಗಳೇನು?:

  1. ನಾಲ್ಕು ಕಾರ್ಮಿಕ ಸಂಹಿತೆಗಳು ಮತ್ತು ನಿಯಮಗಳನ್ನು ರದ್ದುಪಡಿಸುವುದು.
  2. ಬೀಜ ಕರಡು ಮಸೂದೆ ಮತ್ತು ವಿದ್ಯುತ್ ತಿದ್ದುಪಡಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವುದು.
  3. ಖಾಸಗೀಕರಣ ಮತ್ತು ಕಾರ್ಪೊರೇಟ್‌ ಸ್ನೇಹಿ ಸುಧಾರಣೆಗಳಿಗೆ ವಿರೋಧ
  4. ಮನರೇಗಾ ರದ್ದು ವಾಪಸ್ ಪಡೆಯಬೇಕು
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

1 hour ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

1 hour ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

1 hour ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

1 hour ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

1 hour ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

1 hour ago