ನವದೆಹಲಿ : ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ೧೫ ಸಾವಿರ ವೇತನ ನೀಡಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಹೇಳಿದ್ದಾರೆ.
ಲೋಕಸಭೆಯಲ್ಲಿ ತಮ್ಮ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ , ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಭಾಗವಾಗಿ ಔಪಚಾರಿಕ ವಲಯ ಮತ್ತು ಉತ್ಪಾದನಾ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಪಡೆದ ಎಲ್ಲರಿಗೂ ಸರ್ಕಾರ ಒಂದು ತಿಂಗಳ ವೇತನ ನೀಡಲಿದೆ ಎಂದು ಹೇಳಿದರು.
ಒಂದು ತಿಂಗಳ ಸಂಬಳದ ನೇರ ಲಾಭ ವರ್ಗಾವಣೆ ಮೂಲಕ ೧೫ ಸಾವಿರ ಹಣವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ತಿಂಗಳಿಗೆ ಗರಿಷ್ಠ ೧ ಲಕ್ಷ ರೂ ಸಂಬಳ ಪಡೆಯುವ ಉದ್ಯೋಗಿಗಳು ಈ ಯೋಜನೆಯ ಲಾಭ ಪಡೆಯಬಹುದು. ಈ ಪ್ರಯೋಜನಗಳನ್ನು ಪಡೆಯಲು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ನೋಂದಾಯಿಸಿಕೊಳ್ಳುವುದನ್ನ ಕಡ್ಡಾಯ ಮಾಡಲಾಗಿದೆ. ಈ ಯೋಜನೆಯಿಂದ ಸುಮಾರು ೨.೧೦ ಹೊಸ ಉದ್ಯೋಗಿಗಳಿಗೆ ಲಾಭ ಸಿಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.





