Mysore
21
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಮಹಿಳಾ ವಲಯಕ್ಕೆ ಬಂಪರ್ ಕೊಡುಗೆ ನೀಡಿದ ನಿರ್ಮಲಾ ಸೀತಾರಾಮನ್

ನವದೆಹಲಿ : ಆರ್ಥಿಕ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಹೆಚ್ಚಿಸಲು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಲಾಭದಾಯಕ ಯೋಜನೆಗಳಿಗಾಗಿ ಬಜೆಟ್‌ ನಲ್ಲಿ ೩ ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ ಎಂದು ಹೇಳುವ ಮೂಲಕ ಹಣಕಾಸು ಸಚಿವೆ  ನಿರ್ಮಾಲಾ ಸೀತಾರಾಮನ್‌ ಮಹಿಳಾ ವಲಯಕ್ಕೆ ಬಂಪರ್‌ ಕೊಡುಗೆ ನೀಡಿದ್ದಾರೆ.

ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್‌ ಮಂಡಿಸಿದ ನಿರ್ಮಾಲಾ ಸೀತಾರಾಮನ್‌, ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸರ್ಕಾರ ಮಹಿಳಾ ವಸತಿ ನಿಲಯಗಳನ್ನು ಸ್ಥಾಪಿಸುತ್ತದೆ ಎಂದು ಘೋಷಿಸಿದರು.

೨೦೨೪ -೨೫ರ ಕೇಂದ್ರ ಬಜೆಟ್‌ ನಲ್ಲಿ ಮಹಿಳೆಯರು ಮತ್ತು ಬಾಲಕಿಯರಿಗೆ ೩ ಲಕ್ಷ ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಒದಗಿಸಲಾಗುವುದು. ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ದುಡಿಯುವ ಮಹಿಳೆಯರಿಗೆ ಹಾಸ್ಟೆಲ್‌ ಗಳನ್ನು ನಿರ್ಮಿಸಲಿದೆ. ಉದ್ಯೋಗ, ಕೌಶಲ್ಯ, MSME ಗಳು ಮತ್ತು ಮಧ್ಯಮ ವರ್ಗದ ಮೇಲೆ ಈ ಬಾರಿಯ ಬಜೆಟ್‌ ಕೇಂದ್ರಿಕರಿಸುತ್ತದೆ ಎಂದು ಹೇಳಿದರು.

Tags:
error: Content is protected !!