ದೇಶ- ವಿದೇಶ

ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ೧೫ ಸಾವಿರ ವೇತನ

ನವದೆಹಲಿ : ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ೧೫ ಸಾವಿರ ವೇತನ ನೀಡಲಾಗುವುದು ಎಂದು ಕೇಂದ್ರ ಸಚಿವೆ  ನಿರ್ಮಾಲಾ ಸೀತಾರಾಮನ್‌ ಹೇಳಿದ್ದಾರೆ.

ಲೋಕಸಭೆಯಲ್ಲಿ ತಮ್ಮ ಬಜೆಟ್‌ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್‌ , ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಭಾಗವಾಗಿ ಔಪಚಾರಿಕ ವಲಯ ಮತ್ತು ಉತ್ಪಾದನಾ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಪಡೆದ ಎಲ್ಲರಿಗೂ ಸರ್ಕಾರ ಒಂದು ತಿಂಗಳ ವೇತನ ನೀಡಲಿದೆ ಎಂದು ಹೇಳಿದರು.

ಒಂದು ತಿಂಗಳ ಸಂಬಳದ ನೇರ ಲಾಭ ವರ್ಗಾವಣೆ ಮೂಲಕ ೧೫ ಸಾವಿರ ಹಣವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ತಿಂಗಳಿಗೆ ಗರಿಷ್ಠ ೧ ಲಕ್ಷ ರೂ ಸಂಬಳ ಪಡೆಯುವ ಉದ್ಯೋಗಿಗಳು ಈ ಯೋಜನೆಯ ಲಾಭ ಪಡೆಯಬಹುದು. ಈ ಪ್ರಯೋಜನಗಳನ್ನು ಪಡೆಯಲು ಉದ್ಯೋಗಿಗಳ ಭವಿಷ್ಯ  ನಿಧಿ ಸಂಸ್ಥೆಯಲ್ಲಿ ನೋಂದಾಯಿಸಿಕೊಳ್ಳುವುದನ್ನ  ಕಡ್ಡಾಯ ಮಾಡಲಾಗಿದೆ.  ಈ ಯೋಜನೆಯಿಂದ ಸುಮಾರು ೨.೧೦ ಹೊಸ ಉದ್ಯೋಗಿಗಳಿಗೆ ಲಾಭ ಸಿಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

36 mins ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

2 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

2 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

4 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

4 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

5 hours ago