Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಇಂದಿರಾಗಾಂಧಿ ದಾಖಲೆ ಮುರಿದ ಮೋದಿ: ಪ್ರಧಾನಿಯಾಗಿ ದೀರ್ಘಕಾಲ ಸೇವೆ

pm naredra Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಇಂದಿರಾ ಗಾಂಧಿ ಅವರನ್ನು ಹಿಂದಿಕ್ಕಿ ದೇಶದಲ್ಲೇ ಅತೀ ಹೆಚ್ಚು ದಿನಗಳ ಕಾಲ ಪ್ರಧಾನಿಯಾದ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

ಸದ್ಯ ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರ್ ಲಾಲ್ ನೆಹರು ಅವರು ಅತೀ ಹೆಚ್ಚು ಕಾಲ (6130 ದಿನ) ಗಳ ಸೇವೆ ಸಲ್ಲಿಸಿದ ದಾಖಲೆ ನಿರ್ಮಿಸಿದ್ದಾರೆ.

ಇದೀಗ ಮೋದಿ ಅವರು, ಇಂದಿಗೆ 4,078 ದಿನಗಳನ್ನು ಅಧಿಕಾರದಲ್ಲಿ ಪೂರೈಸಿ ಇಂದಿರಾಗಾಂಧಿ ಅವರ ದಾಖಲೆಯನ್ನು ಮುರಿದಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಜನವರಿ 24, 1966 ರಿಂದ ಮಾರ್ಚ್ 24, 1977 ರವರೆಗೆ 4,077 ದಿನಗಳ ಕಾಲ ನಿರಂತರ ಅಧಿಕಾರದಲ್ಲಿದ್ದರು.

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಹೆಸರಿನಲ್ಲಿ ಮುರಿಯದ ದಾಖಲೆ ಇದೆ. ಸತತ ಮೂರು ಲೋಕಸಭಾ ಚುನಾವಣೆಗಳಲ್ಲಿ ತಮ್ಮ ಪಕ್ಷಗಳನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ನರೇಂದ್ರ ಮೋದಿ ಅವರು ನೆಹರು ಅವರನ್ನು ಸರಿಗಟ್ಟಿದ್ದಾರೆ.

ರಾಜ್ಯ ಮತ್ತು ಕೇಂದ್ರದಲ್ಲಿ ಚುನಾಯಿತ ಸರ್ಕಾರದ ಮುಖ್ಯಸ್ಥರಾಗಿ, ನರೇಂದ್ರ ಮೋದಿ ಈಗಾಗಲೇ ಅತಿ ಹೆಚ್ಚು ಕಾಲ ಅಧಿಕಾರದಲ್ಲಿದ್ದಾರೆ. ಅವರು 2001ರಲ್ಲಿ ಗುಜರಾತ್ ಮುಖ್ಯಮಂತ್ರಿಯಾದರು ಮತ್ತು 2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಅಧಿಕಾರದಲ್ಲಿದ್ದರು.

ಸ್ವಾತಂತ್ರ್ಯದ ನಂತರ ಜನಿಸಿದ ಮೊದಲ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷದಿಂದ ಹೊರತಾದ ಅತ್ಯಂತ ದೀರ್ಘಾವಧಿಯ ಪ್ರಧಾನಿಯೂ ಆಗಿದ್ದಾರೆ. ಗುಜರಾತ್‍ನಲ್ಲಿ ಜನಿಸಿದ ನಾಯಕ ಕೇಂದ್ರ ಸರ್ಕಾರದ ಮುಖ್ಯಸ್ಥರಾಗಿ ಎರಡು ಪೂರ್ಣ ಅವಧಿಗಳನ್ನು ಪೂರ್ಣಗೊಳಿಸಿದ ಏಕೈಕ ಕಾಂಗ್ರೆಸ್ಸೇತರ ನಾಯಕ ಎಂದು ಅಧಿಕಾರಿಗಳು ಗಮನಿಸಿದ್ದಾರೆ.

Tags:
error: Content is protected !!