ನವದೆಹಲಿ: ಇಂದು(ಜೂನ್.6) ದೆಹಲಿಯಲ್ಲಿ ನಡೆದ ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ನರೇಂದ್ರ ಮೋದಿ ಅವರು ಎನ್‌ಡಿಎ ನಾಯಕರಾಗಿ ಆಯ್ಕೆಯಾಗಿದ್ದಾರೆ.
ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಎನ್ ಡಿ.ಎ ಮೈತ್ರಿಕೂಟದ ಒಮ್ಮತದ ನಾಯಕರಾಗಿ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದು, ಶುಕ್ರವಾರ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
ಜೂನ್ 7 ರಂದು ಎನ್‌ಡಿಎ ಸಂಸದರೊಂದಿಗೆ ಸಭೆ ನಡೆಸಲಾಗುವುದು. ನಂತರ ಬಳಿಕ ಎಲ್ಲ ಮಿತ್ರಪಕ್ಷಗಳ ಜೊತೆಗೂಡಿ ರಾಷ್ಟ್ರಪತಿ ಅವರನ್ನು ಭೇಟಿ ಆಗಲಿದ್ದಾರೆ. ಜೂನ್ 8ರಂದು ಪ್ರಧಾನಿ ಹಾಗೂ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮಹಾರಾಷ್ಟ್ರದ ಸಿ.ಎಂ.ಏಕ್ ನಾಥ್ ಶಿಂಧೆ, ಹೆಚ್.ಡಿ. ಕುಮಾರಸ್ವಾಮಿ, ಚಿರಾಗ್ ಪಾಸ್ವಾನ್ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಎಲ್ಲಾ ನಾಯಕರು ಭಾಗವಹಿಸಿದ್ದರು.