ದೇಶ- ವಿದೇಶ

ಎನ್‌ಡಿಎ ನಾಯಕರಾಗಿ ಮೋದಿ ಆಯ್ಕೆ: ಜೂ.8 ರಂದು ಪ್ರಮಾಣವಚನ

ನವದೆಹಲಿ: ಇಂದು(ಜೂನ್.‌6) ದೆಹಲಿಯಲ್ಲಿ ನಡೆದ ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ನರೇಂದ್ರ ಮೋದಿ ಅವರು ಎನ್‌ಡಿಎ ನಾಯಕರಾಗಿ ಆಯ್ಕೆಯಾಗಿದ್ದಾರೆ.

ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಎನ್ ಡಿ.ಎ ಮೈತ್ರಿಕೂಟದ ಒಮ್ಮತದ ನಾಯಕರಾಗಿ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದು, ಶುಕ್ರವಾರ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಜೂನ್ 7 ರಂದು ಎನ್‌ಡಿಎ ಸಂಸದರೊಂದಿಗೆ ಸಭೆ ನಡೆಸಲಾಗುವುದು. ನಂತರ ಬಳಿಕ ಎಲ್ಲ ಮಿತ್ರಪಕ್ಷಗಳ ಜೊತೆಗೂಡಿ ರಾಷ್ಟ್ರಪತಿ ಅವರನ್ನು ಭೇಟಿ ಆಗಲಿದ್ದಾರೆ. ಜೂನ್​ 8ರಂದು ಪ್ರಧಾನಿ ಹಾಗೂ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮಹಾರಾಷ್ಟ್ರದ ಸಿ.ಎಂ‌.ಏಕ್ ನಾಥ್ ಶಿಂಧೆ, ಹೆಚ್.ಡಿ. ಕುಮಾರಸ್ವಾಮಿ, ಚಿರಾಗ್ ಪಾಸ್ವಾನ್ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಎಲ್ಲಾ ನಾಯಕರು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

10 mins ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

32 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

2 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

3 hours ago