ಕರೂರು : ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ದಳಪತಿ ಆಯೋಜಿಸಿದ್ದ ಪ್ರಚಾರದ ರ‍್ಯಾಲಿಯ ವೇಳೆ ಕಾಲ್ತುಳಿತ ಉಂಟಾಗಿ 31 ಅಮಾಯಕ ಜನರು ಮೃತಪಟ್ಟಿದ್ದಾರೆ. ಇನ್ನೂ 60ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಸಿರಾಟದ ತೊಂದರೆ ಅನುಭವಿಸಿದ ಜನರು ಮೂರ್ಛೆ ತಪ್ಪ ಬಿದ್ದರು. ಅಲ್ಲದೆ, ಇಂದು ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅಭಿಮಾನಿಗಳು ಸುಸ್ತಿನಿಂದ ಬಳಲುತ್ತಿದ್ದರು. ಅದೇವೇಳೆ ನೂಕು ನುಗ್ಗಲಾಗಿದ್ದರಿಂದ ಮೂರ್ಛೆ ತಪ್ಪಿ ಬಿದ್ದರು. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಇದನ್ನೂ ಓದಿ:-ಭವಿಷ್ಯದಲ್ಲಿ ಕಾಶಿಯಂತೆ “ಕಾವೇರಿ ಆರತಿ” ಪ್ರಸಿದ್ಧಿ : ನಿಶ್ಚಲಾನಂದನಾಥ ಸ್ವಾಮೀಜಿ ಭವಿಷ್ಯ
ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ತಮಿಳುನಾಡು ಕಾಲ್ತುಳಿತ ಘಟನೆಯ ಬಗ್ಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಾಹಿತಿ ಪಡೆದಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ನಾಳೆ (ಭಾನುವಾರ) ಕರೂರ್‌ಗೆ ಭೇಟಿ ನೀಡುವ ಸಾಧ್ಯತೆ ಇದೆ. ಗಾಯಾಳುಗಳಿಗೆ ತಕ್ಷಣದ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. “ಕರೂರ್ ನಿಂದ ಬರುತ್ತಿರುವ ಸುದ್ದಿ ಆತಂಕಕಾರಿಯಾಗಿದೆ. ಕಾಲ್ತುಳಿತದಿಂದಾಗಿ ಮೂರ್ಛೆ ಹೋಗಿ ಆಸ್ಪತ್ರೆಗೆ ದಾಖಲಾಗಿರುವ ಸಾರ್ವಜನಿಕರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡುವಂತೆ ನಾನು ಸೂಚಿಸಿದ್ದೇನೆ” ಎಂದು ಸಿಎಂ ಸ್ಟಾಲಿನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೇಂದ್ರ ಸಚಿವ ರಾಜನಾಥ್ ಸಿಂಗ್, ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.





