ದೇಶ- ವಿದೇಶ

ವಿಜಯ್‌ ರ‍್ಯಾಲಿ ವೇಳೆ ಕಾಲ್ತುಳಿತ ದುರಂತಕ್ಕೆ ಮೋದಿ ಸಂತಾಪ : ಕರೂರಿಗೆ ಸ್ಟಾಲಿನ್‌ ಭೇಟಿ ಸಾಧ್ಯತೆ

ಕರೂರು : ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ದಳಪತಿ ಆಯೋಜಿಸಿದ್ದ ಪ್ರಚಾರದ ರ‍್ಯಾಲಿಯ ವೇಳೆ ಕಾಲ್ತುಳಿತ ಉಂಟಾಗಿ 31 ಅಮಾಯಕ ಜನರು ಮೃತಪಟ್ಟಿದ್ದಾರೆ. ಇನ್ನೂ 60ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಸಿರಾಟದ ತೊಂದರೆ ಅನುಭವಿಸಿದ ಜನರು ಮೂರ್ಛೆ ತಪ್ಪ ಬಿದ್ದರು. ಅಲ್ಲದೆ, ಇಂದು ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅಭಿಮಾನಿಗಳು ಸುಸ್ತಿನಿಂದ ಬಳಲುತ್ತಿದ್ದರು. ಅದೇವೇಳೆ ನೂಕು ನುಗ್ಗಲಾಗಿದ್ದರಿಂದ ಮೂರ್ಛೆ ತಪ್ಪಿ ಬಿದ್ದರು. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:-ಭವಿಷ್ಯದಲ್ಲಿ ಕಾಶಿಯಂತೆ “ಕಾವೇರಿ ಆರತಿ” ಪ್ರಸಿದ್ಧಿ : ನಿಶ್ಚಲಾನಂದನಾಥ ಸ್ವಾಮೀಜಿ ಭವಿಷ್ಯ

ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ತಮಿಳುನಾಡು ಕಾಲ್ತುಳಿತ ಘಟನೆಯ ಬಗ್ಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಾಹಿತಿ ಪಡೆದಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ನಾಳೆ (ಭಾನುವಾರ) ಕರೂರ್‌ಗೆ ಭೇಟಿ ನೀಡುವ ಸಾಧ್ಯತೆ ಇದೆ. ಗಾಯಾಳುಗಳಿಗೆ ತಕ್ಷಣದ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. “ಕರೂರ್ ನಿಂದ ಬರುತ್ತಿರುವ ಸುದ್ದಿ ಆತಂಕಕಾರಿಯಾಗಿದೆ. ಕಾಲ್ತುಳಿತದಿಂದಾಗಿ ಮೂರ್ಛೆ ಹೋಗಿ ಆಸ್ಪತ್ರೆಗೆ ದಾಖಲಾಗಿರುವ ಸಾರ್ವಜನಿಕರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡುವಂತೆ ನಾನು ಸೂಚಿಸಿದ್ದೇನೆ” ಎಂದು ಸಿಎಂ ಸ್ಟಾಲಿನ್ ಎಕ್ಸ್​ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇಂದ್ರ ಸಚಿವ ರಾಜನಾಥ್ ಸಿಂಗ್, ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

1 hour ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

2 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

3 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

3 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

4 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

4 hours ago