ಚಂಡಿಗಢ: ಪ್ರಸ್ತುತ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅವಧಿ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೇ.30ರ ಸಂಜೆಯಿಂದ ಜೂನ್ 1 ರ ಸಂಜೆಯರೆಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕನಾಂದ ಸ್ಮಾರಕದಲ್ಲಿ ಎರಡು ದಿನಗಳ ವಾಸ್ತವ್ಯ ಹೂಡಲಿದ್ದಾರೆ. ಜತೆಗೆ ಮೇ.31 ರಂದು ವಿವೇಕಾನಂದ ಸ್ಮಾರಕದ ಧ್ಯಾನಮಂಟಪದಲ್ಲಿ ಧ್ಯಾನ ಮಾಡಲಿದ್ದಾರೆ. ಈ ಬಗ್ಗೆ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ವ್ಯಂಗವಾಡಿದ್ದಾರೆ.
ವಿವೇಕದ ಅರ್ಥ ಗೊತ್ತಿಲ್ಲದ ಮೋದಿ ಅವರು ವಿವೇಕನಂದಾ ಸ್ಮಾರಕದಲ್ಲಿ ಯಾವ ಧ್ಯಾನ ಮಾಡುವರು. ಮೋದಿ ಅವರು ಧ್ಯಾನಕ್ಕಿಂತ ಪ್ರಾಯಶ್ಚಿತ್ತಕ್ಕಾಗಿ ಕನ್ಯಾಕುಮಾರಿಗೆ ಹೋಗುವುದು ಒಳ್ಳೆಯದು ಅಥವಾ ಸ್ವಾಮಿ ವಿವೇಕನಂದರ ಬರಹ ಮತ್ತು ಭಾಷಣಗಳಿಂದ ಸ್ಫೂರ್ತಿ ಪಡೆಯಲು ಹೊರಟರೆ ಒಳ್ಳೆಯದು ಎಂದು ಕಪಿಲ್ ಸಿಬಲ್ ಲೇವಡಿ ಮಾಡಿದ್ದಾರೆ.
ಕಳೆದ ೧೦ ವರ್ಷದಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನು ಸಾಧನೆ ಮಾಡಿದೆ. ಮೋದಿ ತಮ್ಮ ಭಾಷಣದಲ್ಲಿ ಸಾಧನೆ ಬಗ್ಗೆ ಏನಾದರೂ ಹೇಳಿದ್ದಾರಾ? ಮೋದಿ ಕೊಟ್ಟ ಭರವಸೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ ಎಂದರು.
ತಮ್ಮ ಭಾಷಣದಲ್ಲಿ ನವ ಭಾರತ ನಿರ್ಮಾಣ ಮಾಡುವುದಾಗಿ ಹೇಳಿರುವ ಮೋದಿ, ಅಧಿಕಾರಕ್ಕೆ ಬಂದ ೧೦ ವರ್ಷದಲ್ಲಿ ಯಾವ ನವ ಭಾರತ ನಿರ್ಮಾಣ ಮಾಡಿದ್ದಾರೆ? ಮೋದಿ ಸಾಧನೆ ಶೂನ್ಯ, ಅವರು ಏನಾದರೂ ಸಾಧನೆ ಮಾಡಿದ್ದರೆ ಮಂಗಳಸೂತ್ರ, ಮುಜ್ರಾ, ವೋಟ್‌ಬ್ಯಾಂಕ್ ರಾಜಕೀಯ, ವೋಟ್ ಜಿಹಾದ್ ಬಗ್ಗೆ ಮಾತನಾಡುತ್ತಿರಲಿಲ್ಲ ಎಂದು ಕಪಿಲ್ ಸಿಬಲ್ ಕುಟುಕಿದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…