ದೇಶ- ವಿದೇಶ

ಸಂಸತ್ತಿನಲ್ಲಿ ಪರಸ್ಪರ ಕೈಕುಲುಕಿದ ಮೋದಿ-ರಾಹುಲ್

ಹೊಸದಿಲ್ಲಿ: 18 ನೇ ಲೋಕಸಭೆಯ ಅಧೀವೇಶನವು ಹಂಗಾಮಿ ಸ್ಪೀಕರ್‌ ಭರ್ತೃಹರಿ ಮಹತಾಬ್‌ ಅವರ ನೇತೃತ್ವದಲ್ಲಿ ಜೂನ್‌ 24 ರಂದು ಪ್ರಾರಂಭವಾಗಿದೆ. ಇಂದು(ಜೂ.26) ಅಧಿಕೃತವಾಗಿ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಓಂ ಬಿರ್ಲಾ ಅವರು ಸತತ ಎರಡನೇ ಬಾರಿಗೆ ಸ್ಪೀಕರ್‌ ಹುದ್ದೆ ಏರಿದ ಸಂಸದರಾಗಿದ್ದಾರೆ.

ಇಂದು ಹೊಸ ಸಭಾಧ್ಯಕ್ಷರನ್ನು ಸ್ವಾಗತಿಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಪರಸ್ಪರ ಕೈಕುಲುಕಿ ಗಮನ ಸೆಳೆದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಂಸದ ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಆಯ್ಕೆಮಾಡುವ ಪ್ರಸ್ತಾಪವನ್ನು ಮೋದಿ ಮಂಡಿಸಿದರು. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಅನುಮೋದಿಸಿದರು. ಪ್ರಸ್ತಾಪಕ್ಕೆ ಧ್ವನಿ  ಮತದ ಮೂಲಕ  ಅನುಮೋದನೆ ದೊರಕಿತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ

ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…

28 mins ago

ಓದುಗರ ಪತ್ರ: ಸೈಬರ್ ವಂಚನೆ ಪ್ರಕರಣ ತಡೆಗೆ ಜಾಗೃತಿ ಮೂಡಿಸುವುದು ಅಗತ್ಯ

ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ…

39 mins ago

ಬಾ.ನಾ.ಸುಬ್ರಹ್ಮಣ್ಯ ವಾರದ ಅಂಕಣ:  ಕೆಳಗಿನ ಕೋರ್ಟಿನಲ್ಲಿ ನಟ ದಿಲೀಪ್ ಆರೋಪ ಮುಕ್ತ;  ಅವಳೊಂದಿಗೆ v/s ದಿಲೀಪ್ ಪರ

ಜನಪ್ರಿಯ ನಟರು ಜೈಲಲ್ಲಿದ್ದರೆ, ಜಾಮೀನಿನಿಂದ ಹೊರಬಂದರೆ ಅಂತಹ ಪ್ರಕರಣದ ತೀರ್ಪಿನ ಬಗ್ಗೆ ಜನರ ಕುತೂಹಲ ಹೆಚ್ಚು. ಮಲಯಾಳ ಚಿತ್ರರಂಗದ ಹೆಸರಾಂತ…

1 hour ago

ರೈತರು ಬೆಳೆದ ಕಾಫಿ, ಅಡಿಕೆ, ಮೆಣಸು ಕಳ್ಳರ ಪಾಲು

ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ,…

2 hours ago

ಸರಗೂರು ಸಾರಿಗೆ ಬಸ್‌ ನಿಲ್ದಾಣದಲ್ಲಿ ಅವ್ಯವಸ್ಥೆ

ದಾಸೇಗೌಡ  ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್…

4 hours ago

19 ಬೇಚರಾಕ್ ಹಳ್ಳಿಗಳು ಇನ್ಮುಂದೆ ಕಂದಾಯ ಗ್ರಾಮಗಳು

ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು…

4 hours ago